ADVERTISEMENT

ಮಸ್ಕಿ: ಕಾಂಗ್ರೆಸ್‌ನತ್ತ ಬಿಜೆಪಿಯ ಬಸನಗೌಡ ತುರ್ವಿಹಾಳ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 16:59 IST
Last Updated 6 ನವೆಂಬರ್ 2020, 16:59 IST
ಬಸನಗೌಡ ತುರ್ವಿಹಾಳ
ಬಸನಗೌಡ ತುರ್ವಿಹಾಳ   

ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಪ್ರತಾಪಗೌಡ ಪಾಟೀಲರಿಗೆ ನೀಡುವುದು ಖಚಿತವಾಗುತ್ತಿದ್ದಂತೆಯೇ, ಕಳೆದಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ 213 ಮತಗಳಿಂದ ಪರಾಭವಗೊಂಡಿದ್ದ ಬಸನಗೌಡ ತುರ್ವಿಹಾಳ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ.

ಪ್ರತಾಪಗೌಡ ಅಕ್ರಮ ಮತಗಳ ಮೂಲಕ ಗೆದ್ದಿದ್ದಾರೆ ಎಂದು ಬಸನಗೌಡ ಹೈಕೋರ್ಟ್‌ ಮೊರೆ ಹೋಗಿದ್ದರು. ಬಿಜೆಪಿ ವರಿಷ್ಠರುಬಸನಗೌಡರಿಗೆ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಿ ಅತೃಪ್ತಿ ಶಮನಕ್ಕೆ ಯತ್ನಿಸಿದ್ದರು. ಪ್ರಕರಣ ವಾಪಸ್ ಪಡೆಯುವಂತೆಯೂ ಮಾಡಿದ್ದರು.‌

ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಪ್ರತಾಪಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ADVERTISEMENT

‘ಬಸನಗೌಡರನ್ನು ಸೆಳೆಯಲು ಕಾಂಗ್ರೆಸ್ ಮುಖಂಡರೂ ಯತ್ನಿಸು
ತ್ತಿದ್ದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದು,ಪಕ್ಷ ಸೇರ್ಪಡೆ ಖಚಿತವಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ಮಸ್ಕಿ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.