ಮಸ್ಕಿ: ಪಡಿತರದಾರರಿಗೆ ವಿತರಣೆಯಾದ ಅಕ್ಕಿಯನ್ನು ಖರೀದಿಸಿ ಸಾಗಾಣಿಕೆ ಮಾಡುತ್ತಿದ್ದ ಲಾರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭಾನುವಾರ ರಾತ್ರಿ ಪಟ್ಟಣದ ಕವಿತಾಳ ಕ್ರಾಸ್ ಬಳಿ ವಶಪಡಿಸಿಕೊಂಡಿದ್ದಾರೆ.
ಪಡಿತರದಾರರಿಗೆ ಅಕ್ಕಿ ವಿತರಿಸಿದ ನಂತರ ಅವರಿಂದ ಕಡಿಮೆ ಬೆಲೆಗೆ ಅಕ್ಕಿ ಪಡೆದು ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿದ್ದ ಸಮಯದಲ್ಲಿ ಈ ದಾಳಿ ನಡೆಸಿದ್ದಾರೆ. ₹2 ಲಕ್ಷ ಮೊತ್ತದ 138 ಕ್ವಿಂಟಲ್ ಅಕ್ಕಿ ಸಮೇತ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ (ಕ್ರೈಂ) ಭೀಮದಾಸ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪಿಎಸ್ಐ ಮುದ್ದುರಂಗಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.