ಮಸ್ಕಿ ಜಲಾಶಯ
ಮಸ್ಕಿ: ‘ತಾಲ್ಲೂಕಿನ ಮಾರಲದಿನ್ನಿ ಬಳಿಯ ಮಸ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು ಹಳ್ಳಕ್ಕೆ ನೀರು ಬಿಡುಗಡೆ ಮಾಡಲಾಗುತ್ತಿದೆ’ ಎಂದು ತಹಶೀಲ್ದಾರ್ ಮಂಜುನಾಥ ಬೋಗಾವತಿ ತಿಳಿಸಿದ್ದಾರೆ.
ಹಳ್ಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿದ್ದರಿಂದ ದಂಡೆಯ ಗ್ರಾಮಸ್ಥರು ಹಳ್ಳದಲ್ಲಿ ಇಳಿಯಬಾರದು ಹಾಗೂ ಜಾನುವಾರುಗಳನ್ನು ಬಿಡಬಾರದು ಎಂದು ಮನವಿ ಮಾಡಿದ್ದಾರೆ.
ಹಳ್ಳದ ದಂಡೆಯ ಗ್ರಾಮಗಳಲ್ಲಿ ಡಂಗೋರ ಸಾರಲಾಗಿದೆ ಎಂದು ಮಂಜುನಾಥ ಬೋಗಾವತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.