ಮಸ್ಕಿ: ಪಕ್ಷದ ಸಂಘಟನಾ ಸಭೆಯಲ್ಲಿ ಭಾಗವಹಿಸಲು ಭಾನುವಾರ ಮಸ್ಕಿ ಮಾರ್ಗವಾಗಿ ಗಂಗಾವತಿಗೆ ತೆರಳುತ್ತಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡರು.
ಪಟ್ಟಣದ ಹಳೆಯ ಬಸ್ ನಿಲ್ದಾಣದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಪಕ್ಷದ ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ ಪಕ್ಷದ ಶಾಲು ಹಾಗೂ ಹೂಗುಚ್ಚ ನೀಡಿ ಬರಮಾಡಿಕೊಂಡರು.
ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು, ಪಟಾಕಿ ಸಿಡಿಸಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸ್ವಾಗತ ಕೋರಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಪಾಟೀಲ, ಹಿರಿಯ ಮುಖಂಡ ಮಲ್ಲಪ್ಪ ಅಂಕುಶದೊಡ್ಡಿ, ಪ್ರಸನ್ನ ಪಾಟೀಲ, ಡಾ.ಬಿ.ಎಚ್. ದಿವಟರ್, ಸೂಗಣ್ಣ ಬಾಳೆಕಾಯಿ, ದುರಗಪ್ಪ ಗುಡಗಲದಿನ್ನಿ. ಜಗದೀಶ್ಚಂದ್ರ ಸ್ವಾಮಿ ಹಾಲಾಪೂರ, ಯರ್ರಿತಾತಾ ಮಾಲಿ ಪಾಟೀಲ, ಪಂಪಣ್ಣ ಗುಂಡಳ್ಳಿ. ಜಿ. ವೆಂಕಟೇಶ ನಾಯಕ, ಮೌನೇಶ ನಾಯಕ, ನಾಗರಾಜ ಯಂಬಲದ, ಶಿವಕುಮಾರ ವಟಗಲ್, ಸೇರಿದಂತೆ ಪಕ್ಷದ ಅನೇಕ ಮುಖಂಡರು, ಬಿಜೆಪಿಯ ಪುರಸಭೆ ಸದಸ್ಯರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.