ADVERTISEMENT

ಮಸ್ಕಿ ಜಲಾಶಯ ಭರ್ತಿ

ಸತತವಾಗಿ ಸುರಿಯುತ್ತಿರುವ ಮಳೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 3:23 IST
Last Updated 27 ಸೆಪ್ಟೆಂಬರ್ 2020, 3:23 IST
ಮಸ್ಕಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶನಿವಾರ ಸಂಜೆಯಿಂದ 400 ಕ್ಯೂಸೆಕ್ ನೀರನ್ನು ಮಸ್ಕಿ ಹಳ್ಳಕ್ಕೆ ಬಿಡಲಾಗಿದೆ
ಮಸ್ಕಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶನಿವಾರ ಸಂಜೆಯಿಂದ 400 ಕ್ಯೂಸೆಕ್ ನೀರನ್ನು ಮಸ್ಕಿ ಹಳ್ಳಕ್ಕೆ ಬಿಡಲಾಗಿದೆ   

ಮಸ್ಕಿ: ತಾಲ್ಲೂಕಿನ ಮಾರಲದಿನ್ನಿ ಬಳಿಯ ಮಸ್ಕಿ ಜಲಾಶಯ ಶನಿವಾರ ಭರ್ತಿಯಾಗಿದ್ದು, ಶನಿವಾರ ಸಂಜೆಯಿಂದ ಜಲಾಶಯದ ಗೇಟ್‌ಗಳ ಮೂಲಕ 400 ಕ್ಯೂಸೆಕ್ ನೀರನ್ನು ಹಳ್ಳಕ್ಕೆ ಬಿಡಲಾಗಿದೆ.

ಜಲಾಶಯದ ಮೇಲ್ಭಾಗದಲ್ಲಿ ಸತತ ಮಳೆಯಾಗುತ್ತಿದ್ದರಿಂದ ಜಲಾಶಯದ ಒಳ ಹರಿವು ಹೆಚ್ಚಾಗಿದೆ. ಹೆಚ್ಚುವರಿ ನೀರನ್ನು ಮಸ್ಕಿ ಹಳ್ಳಕ್ಕೆ ಬಿಡಲಾಗುತ್ತಿದ್ದು, ಹಳ್ಳದ ದಂಡೆಯ ಪಕ್ಕದಲ್ಲಿ ಗ್ರಾಮಸ್ಥರು ಹಳ್ಳದಲ್ಲಿ ಇಳಿಯದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಯೋಜನೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಾವುದ್ ತಿಳಿಸಿದ್ದಾರೆ.

ಶನಿವಾರ ಸಂಜೆಯಿಂದ ಜಲಾಶಯದ ಎರಡು ಗೇಟ್‌ಗಳನ್ನು ಎತ್ತಲಾಗಿದೆ. ಎರಡು ಗೇಟ್‌ಗಳ ಮೂಲಕ 400 ಕ್ಯೂಸೆಕ್ ನೀರು ಹೊರ ಹೋಗುತ್ತಿದೆ. ಇನ್ನೂ ಮೇಲ್ಬಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದರಿಂದ ಜಲಾಶಯ ಹೊರ ಹರಿವು ಇನ್ನೂ ಹೆಚ್ಚ ಬಹುದು ಎಂದು ಅವರು ತಿಳಿಸಿದ್ದಾರೆ.

ADVERTISEMENT

ಮಸ್ಕಿ ಹಳ್ಳದ ದಂಡೆ ವ್ಯಾಪ್ತಿಯಲ್ಲಿ ಬರುವ ಮಾರಲದಿನ್ನಿ, ಬಳಗಾನೂರು, ಗೌಡನಭಾವಿ, ಉದ್ಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಜನರು ಜಾನುವಾರುಗಳನ್ನು ಹಾಗೂ ಮಕ್ಕಳನ್ನು ಹಳ್ಳದ ದಡದ ಹತ್ತಿರ ಕಳಿಸಬಾರದು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮಸ್ಕಿ ತಾಲ್ಲೂಕಿನಾದ್ಯಂತ ಶನಿವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದೆ. ಬಹುತೇಕ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನರು ಪರದಾಡುವಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.