ADVERTISEMENT

ಕಾನೂನು ಕ್ರಮಕ್ಕೆ ಅಗ್ರಹ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 10:32 IST
Last Updated 23 ಫೆಬ್ರುವರಿ 2020, 10:32 IST
ರಾಯಚೂರಿನಲ್ಲಿ ಎಐಎಂಐಎಂ ಸೇರಿಂದಂತೆ ಮುಸ್ಲಿಂ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಎಐಎಂಐಎಂ ಸೇರಿಂದಂತೆ ಮುಸ್ಲಿಂ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಹಿಂದೂಸಮ್ರಾಟ ಧರ್ಮಸೇನೆ ರಾಜ್ಯಾಧ್ಯಕ್ಷ ಮಧುಗಿರಿ ಮೋದಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಐಎಂಐಎಂ ಸೇರಿಂದಂತೆ ಮುಸ್ಲಿಂ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಶನಿವಾರ ಮನವಿ ಸಲ್ಲಿಸಿದರು. ಇಸ್ಲಾಂ ಧರ್ಮದ ಸಂಸ್ಥಾಪಕ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲಾತಾಣಗಳಲ್ಲಿ ಹರಿಬಿಟ್ಟು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ. ಸಾಮರಸ್ಯ ಕದಡಿ ಅಶಾಂತಿ ಹುಟ್ಟಿಸಲು ಮುಂದಾಗಿದ್ದು ಮದುಗಿರಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಐಎಂಐಎಂ ಪಕ್ಷದ ನಗರಾಧ್ಯಕ್ಷ ಎಂ.ಡಿ.ಶಾಹೀನ್, ಮೊಹಮ್ಮದ್ ಶಬ್ಬೀರ್, ಮಾಸೂಮ್, ಸಲೀಂ ಸೇರಿ ಮತ್ತಿತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.