ADVERTISEMENT

ಗ್ರಾಪಂ ಅಧ್ಯಕ್ಷರಿಗೆ ಕಾರು ಸೌಲಭ್ಯಕ್ಕೆ ಸಿಎಂಗೆ ಸಲಹೆ: ನಳಿನ್ ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2021, 13:16 IST
Last Updated 19 ನವೆಂಬರ್ 2021, 13:16 IST
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್   

ಸಿರವಾರ (ರಾಯಚೂರು): ‘ಬೇರೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರಿಗೆ ನೀಡುವ ಸೌಲಭ್ಯದ ರೀತಿಯಲ್ಲೇ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೂ ಕಾರುಗಳನ್ನು ನೀಡಬೇಕು. ಪ್ರತಿಯೊಬ್ಬ ಸದಸ್ಯರಿಗೂ ₹10 ಸಾವಿರ ಗೌರವಧನ ಕೊಟ್ಟು ಸ್ವಾಭಿಮಾನ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಹೇಳಿದರು.

ಸಿರವಾರ ಪಟ್ಟಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜನಸ್ವರಾಜ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

‘ಮುಖ್ಯಮಂತ್ರಿ ಈಗಾಗಲೇ ರಾಜ್ಯದ 750 ಗ್ರಾಮಗಳನ್ನು ಅಮೃತ ಯೋಜನೆಯಡಿ ಅಭಿವೃದ್ಧಿ ಮಾಡುತ್ತಿದ್ದಾರೆ. ಮುಂಬರುವ ಬಜೆಟ್‌ನಲ್ಲಿ ರಾಜ್ಯದ ಎಲ್ಲ 5,500 ಗ್ರಾಮಗಳಿಗೂ ಅಮೃತ‌ಯೋಜನೆ ವಿಸ್ತರಿಸುವುದಕ್ಕೆ ಕೋರಲಾಗಿದೆ. ಗ್ರಾಮ ಪಂಚಾಯಿತಿಗಳನ್ನು ಕೇರಳ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಕ್ಕೆ ಬಿಜೆಪಿ ಯೋಜಿಸಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.