ADVERTISEMENT

ಸಿಂಧನೂರು: ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಆಗ್ರಹ

ಸಾಲಗುಂದಾ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 3:38 IST
Last Updated 4 ನವೆಂಬರ್ 2020, 3:38 IST
ಸಾಲಗುಂದಾ ಗ್ರಾಮ ಪಂಚಾಯಿತಿ ಕಚೇರಿ ಬಳಿ ಉದ್ಯೋಗ ಖಾತ್ರಿ ಯೋಜನೆ ಜಾರಿ ಸಮಿತಿಯಿಂದ ಪ್ರತಿಭಟಿಸಲಾಯಿತು
ಸಾಲಗುಂದಾ ಗ್ರಾಮ ಪಂಚಾಯಿತಿ ಕಚೇರಿ ಬಳಿ ಉದ್ಯೋಗ ಖಾತ್ರಿ ಯೋಜನೆ ಜಾರಿ ಸಮಿತಿಯಿಂದ ಪ್ರತಿಭಟಿಸಲಾಯಿತು   

ಸಿಂಧನೂರು: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಜಾರಿ ಸಮಿತಿ ಗ್ರಾಮೀಣ ಘಟಕದಿಂದ ಮಂಗಳವಾರ ತಾಲ್ಲೂಕಿನ ಸಾಲಗುಂದಾ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಯಿತು.

ಸುಮಾರು 15 ವರ್ಷಗಳಿಂದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿಕಾರರು ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಸರಿಯಾದ ಸಮಯದಲ್ಲಿ ಕೆಲಸ ನೀಡುತ್ತಿಲ್ಲ. ಕೆಲಸದ ಸ್ಥಳದಲ್ಲಿ ಯಾವುದೇ ಕನಿಷ್ಠ ಸೌಲಭ್ಯಗಳನ್ನು ನೀಡುತ್ತಿಲ್ಲ. 15 ವರ್ಷಗಳಿಂದ ಕೆಲಸ ಮಾಡುತ್ತಿರುವ ಮೇಸ್ತ್ರಿಗಳಿಗೆ ಇತ್ತೀಚಿಗೆ ವಿದ್ಯಾರ್ಹತೆ ಪ್ರಮಾಣ ಪತ್ರ ಕೇಳಲಾಗುತ್ತಿದೆ. ಕಾರ್ಮಿಕರ ಎನ್‍ಎಂಆರ್ ನೀಡುತ್ತಿಲ್ಲ. ಇದರಿಂದಾಗಿ ಕಾರ್ಮಿಕರ ಹಾಜರಾತಿ ಕುರಿತು ಸರಿಯಾದ ಮಾಹಿತಿ ದೊರೆಯುತ್ತಿಲ್ಲ ಎಂದು ಸಮಿತಿ ಅಧ್ಯಕ್ಷ ಗೇಸುದರಾಜ ಮಕಾನದಾರ್ ಹೇಳಿದರು.

15 ವರ್ಷಗಳಿಂದಕಾಯಕ ಬಂಧುಗಳಾಗಿ ಕೆಲಸ ನಿರ್ವಹಿಸುತ್ತಿರು ವವರಿಗೆ ಮೇಟಿಗಳನ್ನಾಗಿ ಮುಂದುವರೆಸ ಬೇಕು. ಎಲ್ಲಾ ಕಾರ್ಮಿಕರಿಗೆ ಎರಡು ಹಂತಗಳಲ್ಲಿ ಕೆಲಸ ನೀಡಬೇಕು.
ಒಂದು ಯೋಜನೆಯಲ್ಲಿ ಕೆಲಸ ಮುಗಿದು ಅರ್ಜಿ ಸಲ್ಲಿಸಿದ 5 ದಿನಗಳ ಒಳಗಾಗಿ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಕೆಲಸಕ್ಕೆ ಸಂಬಂಧಪಟ್ಟ ಎಂಜನಿಯರ್ ಕೆಲಸದ ಜಿಪಿಎಸ್ ಮತ್ತು ಅಳತೆ ನಿರ್ವಹಣೆ ಮಾಡಬೇಕು. ಕೆಲಸದ ಸ್ಥಳದಲ್ಲಿ ಅಪಘಾತ ನಡೆದರೆ ತಕ್ಷಣ ವೈದ್ಯಕೀಯ ಪರಿಹಾರ ನೀಡಬೇಕು. ಕಾರ್ಮಿಕ ಇಲಾಖೆಯಿಂದ ಎಲ್ಲ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು. ಉದ್ಯೋಗಖಾತ್ರಿ ಯೋಜನೆಯನ್ನು 200 ದಿನಗಳಿಗೆ ವಿಸ್ತರಿಸಬೇಕು. ಈ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ವಲಸೆ ಕಾರ್ಮಿಕರಿಗೂ ಅನ್ವಯಿಸಬೇಕು ಎಂದು ಸಮುದಾಯ ರಾಜ್ಯ ಘಟಕದ ಕಾರ್ಯದರ್ಶಿ, ದೇವೇಂದ್ರಗೌಡ ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಶೇಕ್ಷಾಖಾದ್ರಿ, ಸದಸ್ಯರಾದ ಯಂಕಪ್ಪ ಕೆಂಗಲ್, ಕಾರ್ಯದರ್ಶಿ ಗರೀಬಸಾಬ ಕೊಡ್ಲಿ, ಎಚ್.ಹಳ್ಳಪ್ಪ, ಸದಸ್ಯರಾದ ರಾಜು, ಪರವರಸಾಬ, ಹನುಮಂತಪ್ಪ, ಸಣ್ಣಕನಕಪ್ಪ, ಓಬಳೇಶ, ನಾಗರಾಜ್, ಚಿದಾನಂದ, ರಾಮಣ್ಣ, ಮರಿಯಪ್ಪ, ಶ್ಯಾಮೀದಸಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.