ADVERTISEMENT

ಕೃಷಿ ಸಮಸ್ಯೆಗೆ ವೈಜ್ಞಾನಿಕ ಪರಿಹಾರ ಅಗತ್ಯ: ಡಾ.ಹರೀಶ್‌

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 15:27 IST
Last Updated 3 ಡಿಸೆಂಬರ್ 2021, 15:27 IST
ರಾಯಚೂರು ಕೃಷಿ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಪ್ರಥಮ ರಾಷ್ಟ್ರಪತಿ ಹಾಗೂ ಕೃಷಿ ಮಂತ್ರಿಯೂ ಡಾ. ಬಾಬು ರಾಜೇಂದ್ರ ಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಕಾರ್ಯಕ್ರಮದಲ್ಲಿ ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಹರೀಶ್‌ ರಾಮಸ್ವಾಮಿ ಮಾತನಾಡಿದರು.
ರಾಯಚೂರು ಕೃಷಿ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಪ್ರಥಮ ರಾಷ್ಟ್ರಪತಿ ಹಾಗೂ ಕೃಷಿ ಮಂತ್ರಿಯೂ ಡಾ. ಬಾಬು ರಾಜೇಂದ್ರ ಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಕಾರ್ಯಕ್ರಮದಲ್ಲಿ ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಹರೀಶ್‌ ರಾಮಸ್ವಾಮಿ ಮಾತನಾಡಿದರು.   

ರಾಯಚೂರು: ಪ್ರಸ್ತುತ ಕೃಷಿಯಲ್ಲಿ ರೈತರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಗುರುತಿಸಿ, ವೈಜ್ಞಾನಿಕ ಪರಿಹಾರ ದೊರಕಿಸಿಕೊಡುವ ಅಗತ್ಯತೆಯಿದೆ ಎಂದು ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಹರೀಶ್‌ ರಾಮಸ್ವಾಮಿ ಹೇಳಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್‌ನ ಸಮನ್ವಯ ಕಛೇರಿ, ರಾಷ್ಟ್ರೀಯ ಕೃಷಿ ಉನ್ನತ ಶಿಕ್ಷಣ ಯೋಜನೆ; ರಾಯಚೂರು ಕೃಷಿ ಮಹಾವಿದ್ಯಾಲಯ ಹಾಗೂ ಕೃಷಿ ತಾಂತ್ರಿಕ ಮಹಾವಿದ್ಯಾಲಯಗಳ ಶುಕ್ರವಾರ ಆಯೋಜಿಸಿದ್ದ ಪ್ರಥಮ ರಾಷ್ಟ್ರಪತಿ ಹಾಗೂ ಕೃಷಿ ಮಂತ್ರಿಯೂ ಡಾ. ಬಾಬು ರಾಜೇಂದ್ರ ಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ ಸದಸ್ಯ ಶ್ರೀ ತ್ರಿವಿಕ್ರಮ ಜೋಶಿ ಮಾತನಾಡಿದರು. ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ADVERTISEMENT

ಡಾ. ಸತ್ಯ ನಾರಾಯಣರಾವ್ ಸ್ವಾಗತಿಸಿದರು, ಡಾ. ಪ್ರಮೋದ ಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಡಾ. ಎಸ್.ಬಿ. ಗೌಡಪ್ಪ ವಂದಿಸಿದರು. ಡಾ. ಟಿ.ಸಿ. ಸುಮಾ ನಿರೂಪಿಸಿದರು.

ವಿಶ್ವವಿದ್ಯಾಲಯದ ಅಧಿಕಾರಿಗಳಾದ ಡಾ. ಬಿ.ಕೆ. ದೇಸಾಯಿ, ಡಾ. ಡಿ.ಎಂ. ಚಂದರಗಿ, ಡಾ. ಎಂ. ಭೀಮಣ್ಣ, ಡಾ. ಎಂ. ವೀರನಗೌಡ, ಡಾ. ಎಂ.ಎಸ್. ಅಯ್ಯನಗೌಡರ್, ಡಾ. ಅಶೋಕ ಜೆ., ಡಾ. ಎಸ್.ಬಿ. ಗೌಡಪ್ಪ, ಡಾ. ಜಾಗ್ರ‍್ರತಿ ಬಿ. ದೇಶಮಾನ್ಯ, ಡಾ. ಮಚೇಂದ್ರನಾಥ್, ಶ್ರೀ ರವಿ ಆರ್. ಮೆಸ್ತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.