ಮುದಗಲ್: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ನಾಗಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಬಾಯಿ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜ್ಯೋತಿ ಬಾಯಿ ಅವರು ಪಂಚತಂತ್ರ 2.0 ಮೂಲಕ ಪಂಚಾಯಿತಿ ಸಿಬ್ಬಂದಿ ಹಾಗೂ ತಮ್ಮ ಹಾಜರಿ ಹಾಕಿಲ್ಲ. ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದ್ದಾರೆ. ಆದ ಕಾರಣ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.