ಸಿಂಧನೂರು: ಗುರುವಾರ ನಗರಕ್ಕೆ ಆಗಮಿಸಿದ್ದ ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ತಾಲ್ಲೂಕು ಘಟಕದಿಂದ 350ಕ್ಕೂ ಅಧಿಕ ಟ್ರ್ಯಾಕ್ಟರ್ ರ್‍ಯಾಲಿಯೊಂದಿಗೆ ಅದ್ದೂರಿ ರೋಡ್ ಶೋ ನಡೆಸಲಾಯಿತು.
ಕೆಲ ರೈತರು ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಬಂದಿದ್ದ ಜೋಳದ ಚೀಲಗಳನ್ನು ನೆಲಕ್ಕೆ ಸುರಿಯುವ ಮೂಲಕ ಜೋಳ ಬೆಳೆಗಾರರ ಪರಿಸ್ಥಿತಿಯನ್ನು ನಿಖಿಲ್ ಕುಮಾರಸ್ವಾಮಿ ಗಮನಕ್ಕೆ ತಂದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವುದು ಮೂಗಿಗೆ ತುಪ್ಪ ಸವರುವ ಕೆಲಸ ಹೊರತು ರೈತರ ಬಗ್ಗೆ ಕಾಳಜಿ ಅಲ್ಲ’ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿದರು.
ರೋಡ್ ಶೋ ಗಂಗಾವತಿ ರಸ್ತೆಯ ಮೂಲ ಕಮ್ಮವಾರಿ ಕಲ್ಯಾಣ ಮಂಟಪಕ್ಕೆ ತಲುಪಿತು. ಕುಷ್ಟಗಿ ಮತ್ತು ಗಂಗಾವತಿ ರಸ್ತೆಗಳಲ್ಲಿ ಸುಮಾರು 2 ತಾಸುಗಳ ಕಾಲ ವಾಹನಗಳ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಯಿತು. ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.