ADVERTISEMENT

ತೊಗರಿ ಖರೀದಿಗೆ ಮಿತಿ ಇಲ್ಲ: ಜಯವಂತರಾವ್‌

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2022, 3:01 IST
Last Updated 4 ಫೆಬ್ರುವರಿ 2022, 3:01 IST

ರಾಯಚೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಂದು ಎಕರೆಗೆ 7.5 ಕ್ವಿಂಟಲ್‌ ತೊಗರಿ ಖರೀದಿಸಲಾಗುವುದು. ಇದಕ್ಕೆ ಯಾವುದೇ ಮಿತಿ ಇರುವುದಿಲ್ಲ ಎಂದು ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷಜಯವಂತರಾವ್‌ ಪತಂಗೆ ತಿಳಿಸಿದ್ದಾರೆ.

ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್‌ ಖರೀದಿ ಪ್ರಮಾಣದ ಮಿತಿಯನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ಅಲ್ಲದೆ, ರೈತರಿಂದ ತೊಗರಿ ಖರೀದಿಸುವ ನೋಂದಣಿ ಕಾಲಾವಧಿಯನ್ನು ಫೆಬ್ರುವರಿ 28 ರವರೆಗೂ ವಿಸ್ತರಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT