ADVERTISEMENT

ವಾಲ್ಮೀಕಿ ಸಮಾಜದ ಮೀಸಲಾತಿ ಕಿತ್ತುಕೊಳ್ಳುವುದಿಲ್ಲ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 14:37 IST
Last Updated 7 ಅಕ್ಟೋಬರ್ 2020, 14:37 IST
ಕೆ.ಎಸ್‌.ಈಶ್ವರಪ್ಪ
ಕೆ.ಎಸ್‌.ಈಶ್ವರಪ್ಪ   

ರಾಯಚೂರು: ‘ಸ್ವಾತಂತ್ರ್ಯ ನಂತರದಿಂದಲೂ ಕುರುಬರಿಗೆ ಎಸ್‌ಟಿ ಮೀಸಲಾತಿ ನೀಡುವ ವಿಚಾರ ಚರ್ಚೆ ನಡೆಯುತ್ತಿದೆ. ವಾಲ್ಮೀಕಿ ಸಮಾಜಕ್ಕೆ ನೀಡಿದ ಮೀಸಲಾತಿಯನ್ನು ಕುರುಬರು ಕಸಿದುಕೊಳ್ಳುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಿಮಿತ್ತ ಬುಧವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

‘ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ಸಂಬಂಧಿಸಿದಂತೆ ವರದಿಯೊಂದು ಸಲ್ಲಿಕೆಯಾಗಿದೆ. ಮೀಸಲಾತಿ ಹೆಚ್ಚಿಸಲು ಬದ್ಧ ಇರುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ’ ಎಂದರು.

ADVERTISEMENT

‘ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ಕೊಡಬೇಕು ಎನ್ನುವ ಕೂಗಿಗೆ ಸ್ವಾಮೀಜಿಗಳು ನೇತೃತ್ವ ವಹಿಸಿದ್ದಾರೆ. ಹಿಂದುಳಿದ ಸಮಾಜಕ್ಕೆ ಮೀಸಲಾತಿ ನೀಡಬೇಕು ಎನ್ನುವ ಕೂಗಿಗೆ ನನ್ನ ಬೆಂಬಲವಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.