ADVERTISEMENT

ದೇಶದ್ರೋಹದ ಚಟುವಟಿಕೆ ಸಹಿಸಲ್ಲ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 12:05 IST
Last Updated 23 ಫೆಬ್ರುವರಿ 2020, 12:05 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಸಿಂಧನೂರು (ರಾಯಚೂರು ಜಿಲ್ಲೆ): ‘ದೇಶದ ಅನ್ನ, ಗಾಳಿ, ನೀರು ಸೇವಿಸಿ ವೈರಿ ರಾಷ್ಟ್ರ ಪಾಕಿಸ್ತಾನ ಪರ ಘೋಷಣೆ ಕೂಗಿ ದೇಶದ್ರೋಹದ ಚಟುವಟಿಕೆಯಲ್ಲಿ ತೊಡಗಿರುವ ಮತ್ತು ಅವರಿಗೆ ಪ್ರಚೋದಿಸುವ ಸಮಾಜಘಾತುಕ ಶಕ್ತಿಗಳ ವಿರುದ್ಧನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಮಾದಿಗ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆಲ ವಿಚ್ಛಿದ್ರಕಾರಿ ಶಕ್ತಿಗಳು ದೇಶದೊಳಗಡೆ ಇದ್ದುಕೊಂಡೆ ದೇಶದ್ರೋಹ ಮಾಡುತ್ತಿವೆ. ಅಮೂಲ್ಯ ಎಂಬ ವಿದ್ಯಾರ್ಥಿಯ ಪ್ರಚೋದಿತ ಮಾತಿನ ಹಿಂದೆ ಕೆಲ ಸಂಘಟನೆಗಳಿವೆ ಎಂದು ತಿಳಿದಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪು ಯಾರೇ ಮಾಡಿದ್ದರೂ ಕಾನೂನು ರೀತ್ಯ ಕ್ರಮ ಜರುಗುತ್ತದೆ’ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಅನ್ಯಾಯ ಆಗುವುದಿಲ್ಲ. ಸಿಎಂ ಯಡಿಯೂರಪ್ಪ ಸೂಕ್ತ ಸ್ಥಾನಮಾನ ಕೊಡುತ್ತಾರೆ ಎನ್ನುವ ವಿಶ್ವಾಸವಿದ್ದು, ಸಚಿವ ರಮೇಶ ಜಾರಕಿಹೊಳಿ ಅವರಿಗೆ ಯಾವುದೇ ಅಸಮಾಧಾನ ಉಂಟಾಗಿಲ್ಲ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.