ADVERTISEMENT

ಕಾಯಕ ಪರಂಪರೆಗೆ ಶಕ್ತಿ ನೀಡಿದ ನುಲಿಯ ಚಂದಯ್ಯ: ಸಚಿವ ಎನ್.ಎಸ್.ಬೋಸರಾಜು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 2:31 IST
Last Updated 10 ಆಗಸ್ಟ್ 2025, 2:31 IST
ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ನಡೆದ ಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಅವರು ಚಂದಯ್ಯನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು
ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ನಡೆದ ಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಅವರು ಚಂದಯ್ಯನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು   

ರಾಯಚೂರು: ‘ಕಾಯಕವೇ ಶ್ರೇಷ್ಠವೆಂದು ಕಾಯಕ ಪರಂಪರೆಗೆ ಶಕ್ತಿ ನೀಡಿದ ನುಲಿಯ ಚಂದಯ್ಯ ಅವರು ವಚನಗಳ ಮೂಲಕ ಸಮಾಜದ ಏಳಿಗೆಗೆ ಶ್ರಮಿಸಿದ ಮಹಾನ್ ನಾಯಕರಾಗಿದ್ದಾರೆ. ಅವರ ವಿಚಾರಧಾರೆಗಳ ನ್ನು ಪ್ರತಿ ಮನೆಗೆ ತಲುಪಿಸುವ ಕಾರ್ಯ ಆಗಬೇಕು’ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕೊರಮ ಹಾಗೂ ಕೊರಚ ಸಮಾಜದ ಸಹಯೋಗದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ನಡೆದ ಶರಣ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಚಂದಯ್ಯನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

‘ನುಲಿಯ ಚಂದಯ್ಯನವರ ಚಿಂತನೆಗಳ ಕುರಿತು ಸಮಾಜಕ್ಕೆ ತಿಳಿಸಬೇಕು. ಎಲ್ಲ ಸಮುದಾಯ ಒಟ್ಟಾಗಿ ಸೇರಿ ನುಲಿಯ ಚಂದಯ್ಯನವರ ಜಯಂತಿ ಆಚರಣೆ ಮಾಡುವ ಮೂಲಕ ಅವರು ತೋರಿದ ಮಾರ್ಗದಲ್ಲಿ ಮುನ್ನಡೆಯಬೇಕು’ ಎಂದು ತಿಳಿಸಿದರು.

ADVERTISEMENT

ತಹಶೀಲ್ದಾರ್ ಸುರೇಶ ವರ್ಮಾ, ಮಹಾನಗರ ಪಾಲಿಕೆ‌ ಪ್ರಭಾರ ಮೇಯರ್ ಸಾಜಿದ್ ಸಮೀರ್, ಕಾಂಗ್ರೆಸ್‌ನ ಹಿರಿಯ ಮುಖಂಡ ಕೆ.ಶಾಂತಪ್ಪ, ಜಿ.ಶಿವಮೂರ್ತಿ, ಜಿಲ್ಲಾ ಕಾರ್ಯದರ್ಶಿ ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ಬಸವರಾಜ ಪಾಟೀಲ ಅತ್ತನೂರು,  ರಾಯಚೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ರೆಡ್ಡಿ,‌ ಲಕ್ಷ್ಮೀ ರೆಡ್ಡಿ ಹಾಗೂ ಹುಲುಗಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.