ADVERTISEMENT

ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಅಗತ್ಯ: ತಹಶೀಲ್ದಾರ್ ಭೀಮರಾಯ ರಾಮಸಮುದ್ರ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 5:21 IST
Last Updated 16 ಸೆಪ್ಟೆಂಬರ್ 2025, 5:21 IST
<div class="paragraphs"><p>ಮಾನ್ವಿಯಲ್ಲಿ ಸೋಮವಾರ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಚಾಲನೆ ನೀಡಿದರು.</p></div>

ಮಾನ್ವಿಯಲ್ಲಿ ಸೋಮವಾರ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಚಾಲನೆ ನೀಡಿದರು.

   

ಮಾನ್ವಿ: ‘ಉತ್ತಮ ಆರೋಗ್ಯಕ್ಕಾಗಿ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು’ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಹೇಳಿದರು.

ಸೋಮವಾರ ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ್ ಅಭಿಯಾನದ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮನ್ಸೂರ್ ಅಹ್ಮದ್ ಮಾತನಾಡಿ, 'ಪೋಷಣ್ ಅಭಿಯಾನದ ಅಂಗವಾಗಿ ತಾಲ್ಲೂಕಿನ ಎಲ್ಲಾ 286 ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಹಾಜರಾತಿಯನ್ನು ಪರಿಶೀಲಿಸಿ, ಮಕ್ಕಳ ತೂಕ ಮತ್ತು ಎತ್ತರವನ್ನು ಮಾಪನ ಮಾಡಿಲಾಗುವುದು. ಪೌಷ್ಟಿಕ ಮಕ್ಕಳು, ಸಾಧಾರಣ ಮಕ್ಕಳು, ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಅವರಲ್ಲಿ ಪೋಷಕಾಂಶವನ್ನು ಹೆಚ್ಚಳ ಮಾಡಲು ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗುವುದು’ ಎಂದರು.

ಕಾರ್ಯಕ್ರಮದಲ್ಲಿ ಮನೆಯಲ್ಲಿ ದೊರೆಯುವ ಆಹಾರ ಸಾಮಾಗ್ರಿಗಳನ್ನು ಬಳಸಿಕೊಂಡು ಪೌಷ್ಟಿಕ ಆಹಾವನ್ನು ತಯಾರಿಸುವ ಕುರಿತು ಮಾಹಿತಿ ನೀಡಲಾಯಿತು ಹಾಗೂ ಪೌಷ್ಟಿಕ ಆಹಾರಗಳನ್ನು ಪ್ರದರ್ಶಿಸಲಾಯಿತು.

ಜಿಲ್ಲಾ ನಿರೂಪಣಾಧಿಕಾರಿ ಕುಮಾರ್, ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್, ಮಾನ್ವಿ ವಲಯದ ಎಲ್ಲಾ ಅಂಗನವಾಡಿ ಮೇಲ್ವಿಚಾರಕರು ಹಾಗೂ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.