ADVERTISEMENT

ಬಾಕಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2018, 13:00 IST
Last Updated 29 ಡಿಸೆಂಬರ್ 2018, 13:00 IST
ರಾಯಚೂರಿನಲ್ಲಿ ಶನಿವಾರ ಆಯೋಜಿಸಿದ್ದ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಮಾತನಾಡಿದರು
ರಾಯಚೂರಿನಲ್ಲಿ ಶನಿವಾರ ಆಯೋಜಿಸಿದ್ದ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಮಾತನಾಡಿದರು   

ರಾಯಚೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಹೊಸ ಕಾಮಗಾರಿಗಳನ್ನು ಆರಂಭಿಸಲು ಕ್ರಮ ಜರುಗಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ಹೇಳಿದರು.

ಜಿಲ್ಲಾ ಪಂಚಾಯಿತಿಯ ಜಲ ನಿರ್ಮಲ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಬಾಕಿ ಉಳಿಸಿಕೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಹೊಸ ಕಾಮಗಾರಿಗಳನ್ನು ಆರಂಭಿಸಬೇಕು. ಕಾಮಗಾರಿಗಳನ್ನು ಪೂರ್ಣಗೊಳಿಸಲು ಎಷ್ಟು ಅವಧಿ ಬೇಕಾಗಲಿದೆ. ಹೊಸ ಕಾಮಗಾರಿ ಯಾವಾಗ ಆರಂಭಿಸಲಾಗುತ್ತದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದರು.

ADVERTISEMENT

ಅಂಗನವಾಡಿ ಕಟ್ಟಡಗಳನ್ನು ಪೂರ್ಣಗೊಳಿಸಿ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ಪದಾರ್ಥಗಳನ್ನು ನೀಡಲು ಅನುಕೂಲ ಮಾಡಬೇಕು. ಮಾಹಿತಿಯಿಲ್ಲದಿದ್ದರೆ ಅಧಿಕಾರಿಗಳು ಸಭೆಗೆ ಹಾಜರಾಗಬಾರದು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.