
ರಾಯಚೂರು: ಲೋಕಾಯುಕ್ತ ಅಧಿಕಾರಿಗಳಿಂದ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಲವು ಅಧಿಕಾರಿಗಳು ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳದೇ ಮೊಬೈಲ್‌ನಲ್ಲಿ ಮುಳುಗಿದ್ದರು.
ಕೆಲವರು ಸಿಸಿಟಿವಿ ಕ್ಯಾಮೆರಾ, ರೀಲ್ಸ್, ಫೇಸ್‌ಬುಕ್ ಹಾಗೂ ಮೆಸೇಜ್ ನೋಡುವಲ್ಲಿ ಬ್ಯುಸಿ ಆಗಿದ್ದರು. ಕಾರ್ಯನಿರ್ವಹಣೆಯಲ್ಲಿ ಶಿಸ್ತು ಹಾಗೂ ಗಂಭೀರತೆ ಇರಲಿ ಎಂದು ಲೋಕಾಯುಕ್ತ ಕಾರ್ಯದರ್ಶಿ ಶ್ರೀನಾಥ ಕೆ. ಸೂಚನೆ ನೀಡುತ್ತಿರುವಾಗಲೇ ಕೆಲವು ಅಧಿಕಾರಿಗಳು ವೀಕ್ಷಣೆಯಲ್ಲಿ ತೊಡಗಿದ್ದರು.
ಮಾಧ್ಯಮ ಪ್ರತಿನಿಧಿಗಳು ಈ ವಿಷಯವನ್ನು ಲೋಕಾಯುಕ್ತ ಕಾರ್ಯದರ್ಶಿ ಗಮನಕ್ಕೆ ತಂದಾಗ ಮೊಬೈಲ್ ವೀಕ್ಷಣೆ ಮಾಡುತ್ತಿದ್ದ ಗ್ರಂಥಾಲಯ ಇಲಾಖೆಯ ಮಹಿಳಾ ಅಧಿಕಾರಿ ಸೇರಿದಂತೆ ಎಲ್ಲರಿಗೂ ನೋಟಿಸ್ ಜಾರಿ ಮಾಡಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.