ADVERTISEMENT

ಬಿಜೆಪಿಯ ಸುಳ್ಳು ಭರವಸೆಗಳಿಂದ ಬೇಸತ್ತ ಜನ: ಡಿ.ಎಸ್.ಹೂಲಗೇರಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2024, 15:52 IST
Last Updated 29 ಏಪ್ರಿಲ್ 2024, 15:52 IST
ಹಟ್ಟಿ ಸಮೀಪದ ಆನ್ವರಿ ಗ್ರಾಮದಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಿ.ಎಸ್‌.ಹೂಲಗೇರಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದರು
ಹಟ್ಟಿ ಸಮೀಪದ ಆನ್ವರಿ ಗ್ರಾಮದಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಿ.ಎಸ್‌.ಹೂಲಗೇರಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದರು   

ಹಟ್ಟಿಚಿನ್ನದಗಣಿ: ‘ಬಿಜೆಪಿಯ ಸುಳ್ಳು ಭರವಸೆಗಳಿಂದ ಜನರು ಬೇಸತ್ತು ಹೋಗಿದ್ದಾರೆ’ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಿ.ಎಸ್.ಹೂಲಗೇರಿ ಹೇಳಿದರು.

ಪಟ್ಟಣ ಸಮೀಪದ ಕೋಠಾ, ಆನ್ವರಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಅವರ ಪರ ಮತಯಾಚನೆ ಮಾಡಿ ಮಾತನಾಡಿದರು.

ಕೊಟ್ಟ ಮಾತಿನಂತೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ADVERTISEMENT

ತಾಲ್ಲೂಕಿನಲ್ಲಿ ಶಾಸಕರು ಇದ್ದಾರೋ ಇಲ್ಲವೋ ಎಂಬಂತಾಗಿದೆ. ಜನರ ಸಮಸ್ಯೆಗಳನ್ನು ಆಲಿಸುವಲ್ಲಿ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇಂಥ ಶಾಸಕರಿಂದ ಅಭಿವೃದ್ಧಿ ನಿರೀಕ್ಷೆ ಮಾಡುವುದು ಅಸಾಧ್ಯ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಗ್ರಾಮಿಣ ಜನರ ಸಮಸ್ಯೆಗಳನ್ನು ಬಗೆಹರಿಸಿಕೊಡಲಾಗುವುದು ಎಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಶಿವಣ್ಣ ನಾಯಕ ಕೋಠಾ, ಮುದುಕಪ್ಪ ವಕೀಲ, ಸಂಗಣ್ಣ ದೇಸಾಯಿ, ಶಂಕರ, ವಿಜಯಲಕ್ಷ್ಮಿ, ಬಸವನಗೌಡ ಮೇದಿನಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.