ರಾಯಚೂರು: ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ತಡೆಯಲು ನಗರಸಭೆಯಿಂದ ಕಾರ್ಯಾಚರಣೆ ನಡೆಸಲಾಯಿತು.
ನಗರದ ಅರಬ್ ಮೊಹಲ್ಲಾ, ಲಾಲ್ ಪಹಾಡಿ ಹಾಗೂ ಮತ್ತಿತರ ಬಡಾವಣೆಗಳಲ್ಲಿ ಬೀದಿ ನಾಯಿಗಳನ್ನು ಹಿಡಿಯುವ ತಂಡ ಕಾರ್ಯಾಚರಣೆ ನಡೆಸಿ ನಾಯಿಗಳನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸಿತು.
ನಗರಸಭೆಯ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ಮಾತನಾಡಿ,‘ಬೀದಿ ನಾಯಿಗಳನ್ನು ಹಿಡಿಯಲು ನಗರಸಭೆಯಿಂದ ಟೆಂಡರ್ ಕರೆಯಲಾಗಿದ್ದು, 18,000 ನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಲಸಿಕೆ ಹಾಕಿ ಬಿಡಲಾಗಿದೆ. ಹಂತ ಹಂತವಾಗಿ ಎಲ್ಲಾ ಬಡಾವಣೆಯಗಳಲ್ಲಿ ಕಾರ್ಯಾಚರಣೆ ನಡೆಸಲಾಗುವುದು’ ಎಂದು ಮಾಹಿತಿ ನೀಡಿದರು.
ನಗರಸಭೆಯ ನೈರ್ಮಲ್ಯ ನಿರೀಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.