ADVERTISEMENT

ನೂತನ ಶಿಕ್ಷಣ ನೀತಿ ಜಾರಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 2:28 IST
Last Updated 26 ಸೆಪ್ಟೆಂಬರ್ 2020, 2:28 IST
ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು
ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು   

ರಾಯಚೂರು: ತಿದ್ದುಪಡಿ ಕಾಯ್ದೆಗಳನ್ನು ಕೂಡಲೇ ವಾಪಾಸು ಪಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಪದಾಧಿಕಾರಿಗಳು ಶುಕ್ರವಾರ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಆನಂತರ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿ,ಕಾರ್ಮಿಕರ ಸುಧಾರಣೆ ಹೆಸರಿನಲ್ಲಿ ಕೈಗಾರಿಕೆಗಳ ಎಲ್ಲಾ ಹೊಣೆಗಾರಿಕೆಯನ್ನು ಕೇವಲ ಕಾರ್ಮಿಕರ ಮೇಲೆ ಹೊರಿಸಲಾಗುತ್ತಿದೆ. ಎಂಪಿಎಂಸಿ ಕಾಯ್ದೆ, ಅಗತ್ಯ ಸಾಮಗ್ರಿ ಕಾಯ್ದೆಗಳಿಗೆ ತಿದ್ದುಪಡಿ ತರಲು ಹೊರಟಿರುವುದನ್ನು ವಾಪಾಸು ಪಡೆಯಬೇಕು.ಕಾರ್ಮಿಕರ ಸಂಬಂಧಿಸಿದ ವಿವಿಧ ಕಾಯ್ದೆಗಳನ್ನು ಒಗ್ಗೂಡಿಸಿ ನಾಲ್ಕು ಸಂಹಿತೆಗಳನ್ನು ರಚನೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯುತ್ ಕಾಯ್ದೆ ಬಿಡಿಎ ಕಾಯ್ದೆಯನ್ನು ಕೈಬಿಡಬೇಕು. ಕೇಂದ್ರ ಸರ್ಕಾರದ ರಕ್ಷಣಾ ವಲಯ, ರಕ್ಷಣಾ ಉಪಕರಣ ಕಾರ್ಖಾನೆಗಳು, ಸಾರಿಗೆ, ರೈಲ್ವೆ, ಜೀವವಿಮಾ ನಿಗಮ, ಜೀವವಿಮೆ ನಿಗಮದಲ್ಲಿ ಷೇರು ಮಾರಾಟವನ್ನು ನಿಲ್ಲಿಸಬೇಕು, ಬ್ಯಾಂಕ್‍ಗಳು ಇತರೆ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಣಗೊಳಿಸಬಾರದು. ಹೊಸ ಶಿಕ್ಷಣ ನೀತಿ ಜಾರಿ ಮಾಡಬಾರದು ಎಂದು ಒತ್ತಾಯಿಸಿದರು.

ADVERTISEMENT

ಡಿ.ಎಸ್ ಶರಣಬಸವ, ವರಲಕ್ಷ್ಮೀ, ಎಂ.ರವಿ, ಆನಂದ, ಮಾರೆಪ್ಪ, ರಾಮು, ಕೆ.ಜಿ.ವೀರೇಶ ಬಸವರಾಜ ಗಾರಲದಿನ್ನಿ, ಅಣ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.