ADVERTISEMENT

ರಾಯಚೂರು: ‘ಕುಡಿವ ನೀರು ಕೂಲಂಕಷ ಪರೀಕ್ಷೆ’

ರಾಯಚೂರಿನಲ್ಲಿ ಅಶುದ್ಧ ನೀರು ಕುಡಿದು ಸಾವು

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 20:00 IST
Last Updated 24 ಜೂನ್ 2022, 20:00 IST
   

ನವದೆಹಲಿ: ರಾಯಚೂರಿನಲ್ಲಿ ಅಶುದ್ಧ ನೀರು ಕುಡಿದು ಆರು ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಆ ನ ಗರದ ಕುಡಿಯುವ ನೀರು ಪೂರೈಕೆ ವ್ಯವಸ್ಥೆಯ ಕೂಲಂಕಷ ಪರೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ.

ಕರ್ನಾಟಕ ಭವನದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ ಗಾರರ ಜತೆ ಶುಕ್ರವಾರ ಮಾತನಾಡಿ, ಅಶುದ್ಧ ನೀರು ಪೂರೈಕೆಯಾಗುತ್ತಿದೆ ಎಂದು ರಾಯಚೂರು ನಗರದ ನಿವಾಸಿಗಳು ದೂರಿ
ದ್ದಾರೆ. ಈ ಬಗ್ಗೆ ರಾಜ್ಯ ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿಯ ಮುಖ್ಯ ಎಂಜಿನಿಯರ್‌ ತನಿಖೆ ನಡೆಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹಲವು ಸಭೆಗಳನ್ನು ನಡೆಸಿದ್ದೇನೆ. ಶೀಘ್ರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ’ ಎಂದರು.

‘ಶುದ್ಧ ನೀರು ಪೂರೈಸಲು ಶುದ್ಧ ನೀರಿನ ಘಟಕ ಸ್ಥಾಪಿಸಲಾಗಿದೆ. ಅದರ ನಿರ್ವಹಣೆಯ ವಿಚಾರದಲ್ಲಿ ಸ್ಥಳೀಯ ಆಡಳಿತಕ್ಕೆ ಹೆಚ್ಚಿನ ಪರಿಣತಿ ಇಲ್ಲ. ಈ ಘಟಕವನ್ನು ಕರ್ನಾಟಕ ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿಗೆ ಶೀಘ್ರ ಹಸ್ತಾಂತರ ಮಾಡಲಾಗುತ್ತದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.