ಸಿಂಧನೂರು: ತುಂಗಭದ್ರಾ ಎಡದಂಡೆ ಭಾಗದಲ್ಲಿ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆಯಲಾದ ದುಂಡಾಣು ವೈರಸ್‍ನಿಂದ ಹಾನಿಯಾಗಿದ್ದು ಎಕರೆಗೆ ₹50 ಸಾವಿರ ಪರಿಹಾರ ನೀಡುವಂತೆ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಜಿಲ್ಲಾಧಿಕಾರಿ ನಿತೀಶ್.ಕೆ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.
ಬುಧವಾರ ಜವಳಗೇರಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೆನೆಕಟ್ಟುವ ಹಂತದಲ್ಲಿ ದುಂಡಾಣು ವೈರಸ್ ಹಾಗೂ ವಿಪರೀತ ಮಳೆಯಿಂದ ರೈತರಿಗೆ ತೀವ್ರ ನಷ್ಟವಾಗಿದೆ. ರಸಗೊಬ್ಬರ, ಕ್ರಿಮಿನಾಶಕಕ್ಕೆ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ತಾಲ್ಲೂಕಿನಲ್ಲಿ ಕಳಪೆ ಬೀಜದ ಹಾವಳಿಯೂ ಹೆಚ್ಚಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಲಾಗಿದೆ’ ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ತಹಶೀಲ್ದಾರ್ ಅರುಣ ಹೆಚ್.ದೇಸಾಯಿ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಈರೇಶ ಇಲ್ಲೂರು ವಕೀಲ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.