ADVERTISEMENT

ಸಿಂಧನೂರು | ಹಣ ದುರ್ಬಳಕೆ: ಪಿಡಿಒ ಅಮಾನತು

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 15:53 IST
Last Updated 23 ಜೂನ್ 2025, 15:53 IST
ಮಹಾಂತೇಶ
ಮಹಾಂತೇಶ   

ಸಿಂಧನೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ಉಮಲೂಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಾಂತೇಶ ಅವರನ್ನು ಸರ್ಕಾರದ ವಿವಿಧ ಯೋಜನೆಗಳ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. 

ಪ್ರಸ್ತುತ ಉಮಲೂಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಾಂತೇಶ ಅವರು ಈ ಹಿಂದೆ ರಾಮತ್ನಾಳ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಆಗಿದ್ದರು.

‘ಮಹಾಂತೇಶ ಅವರು ರಾಮತ್ನಾಳ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಆಗಿದ್ದ ಸಂದರ್ಭದಲ್ಲಿ 15ನೇ ಹಣಕಾಸು, ನಿವೇಶನ ಹಾಗೂ ಸರ್ಕಾರದ ವಿವಿಧ ಯೋಜನೆಗಳಲ್ಲಿ ಹಣ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ದೂರು ಬಂದಿತ್ತು. ಜಿಲ್ಲಾ ಪಂಚಾಯಿತಿಯಿಂದ ತನಿಖಾ ತಂಡ ಪರಿಶೀಲನೆಗೆ ಬಂದಿದ್ದಾಗ ಸಮರ್ಪಕ ಮಾಹಿತಿ ಕೊಟ್ಟಿರಲಿಲ್ಲ. ನೋಟಿಸ್‍ಗಳಿಗೂ ಉತ್ತರ ನೀಡಿರಲಿಲ್ಲ. ಈ ಕಾರಣದಿಂದ ಮಹಾಂತೇಶ ಅವರನ್ನು ಅಮಾನತು ಮಾಡಲಾಗಿದೆ’ ಎಂದು ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.