ADVERTISEMENT

ಮಸ್ಕಿ: ಏಮ್ಸ್ ಹೋರಾಟ ಬೆಂಬಲಿಸಿ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 12:33 IST
Last Updated 1 ಜುಲೈ 2022, 12:33 IST
ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ಏಮ್ಸ್ ಹೋರಾಟ ಸಮಿತಿಯಿಂದ ತಹಶೀಲ್ದಾರ್‌ ಕವಿತಾ ಅವರಿಗೆ ಮನವಿ ಸಲ್ಲಿಸಲಾಯಿತು
ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ಏಮ್ಸ್ ಹೋರಾಟ ಸಮಿತಿಯಿಂದ ತಹಶೀಲ್ದಾರ್‌ ಕವಿತಾ ಅವರಿಗೆ ಮನವಿ ಸಲ್ಲಿಸಲಾಯಿತು   

ಪ್ರಜಾವಾಣಿ ವಾರ್ತೆ

ಮಸ್ಕಿ: ರಾಯಚೂರಿಗೆ ಜಿಲ್ಲೆಗೆ ಏಮ್ಸ್ ಆಸ್ಪತ್ರೆ ಮುಂಜೂರು ಮಾಡುವಂತೆ 50 ದಿನಗಳಿಂದ ರಾಯಚೂರಿನಲ್ಲಿ ನಡೆಯುತ್ತಿರುವ ಹೋರಾಟ ಬೆಂಬಲಿಸಿ ಶುಕ್ರವಾರ ಪಟ್ಟಣದಲ್ಲಿ ಏಮ್ಸ್ ಹೋರಾಟ ಸಮಿತಿಯವರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಕವಿತಾ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭವಾದ ಪ್ರತಿಭಟನೆ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು. ನಂತರ ರಾಯಚೂರಿಗೆ ಏಮ್ಸ್ ಆಸ್ಪತ್ರೆ ಮುಂಜೂರು ಮಾಡಿ ಈ ಭಾಗಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಮನವಿ ಸಲ್ಲಿಸಲಾಯಿತು.

ADVERTISEMENT

ಏಮ್ಸ್ ಆಸ್ಪತ್ರೆ ಹೋರಾಟ ಸಮಿತಿ ಮುಖಂಡ ಡಾ.ಶಿವಶರಣಪ್ಪ ಇತ್ಲಿ, ಶಿವಕುಮಾರ ಎನ್. ಅಬ್ದುಲ್ ಗನಿ, ಸುಕಮುನಿಯಪ್ಪ ನಾಯಕ, ಮಲ್ಲಿಕಾರ್ಜುನ ಹಳ್ಳಿ, ಸಿದ್ಧಲಿಂಗಯ್ಯ ಸೊಪ್ಪಿಮಠ, ಮಲ್ಲಿಕಾರ್ಜುನ ನಾಯಿನೇಗಲಿ, ಸಿದ್ಧರಾಮಯ್ಯ ಗಡ್ಡಿಮಠ, ವೀರೇಶ ಸೌದ್ರಿ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.