ADVERTISEMENT

ಹಾಸ್ಟೆಲ್ ಪ್ರಾರಂಭಿಸುವಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2019, 15:22 IST
Last Updated 14 ಸೆಪ್ಟೆಂಬರ್ 2019, 15:22 IST
ರಾಯಚೂರಿನ ಯರಗೇರಾದ ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶುಕ್ರವಾರ ಪ್ರತಿಭಟನೆ ಮಾಡಿದರು
ರಾಯಚೂರಿನ ಯರಗೇರಾದ ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶುಕ್ರವಾರ ಪ್ರತಿಭಟನೆ ಮಾಡಿದರು   

ರಾಯಚೂರು: ತಾಲ್ಲೂಕಿನ ಯರಗೇರಾದ ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳಲ್ಲಿ ತರಗತಿಗಳು ನಡೆಯುತ್ತಿದ್ದು, ಕೂಡಲೇ ಹಾಸ್ಟೆಲ್ ಗಳನ್ನೂ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶುಕ್ರವಾರ ಪ್ರತಿಭಟನೆ ಮಾಡಿದರು.

ವಿದ್ಯಾರ್ಥಿಗಳು ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾರಿಗೆ ವ್ಯವಸ್ಥೆ ಸಮರ್ಪಕವಾಗಿಲ್ಲ. ಇದರಿಂದ ಬಹಳ ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಾದ ಅಂಭಣ್ಣ,ಆನಂದ ಕುಮಾರ, ಕಾರ್ತಿಕ್, ಸಾಬಣ್ಣ, ನಾಗರಾಜ,ಕ್ರಿಷ್ಣ,ಬಸವರಾಜ,ಚಂದ್ರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.