ರಾಯಚೂರು:ಸಾರ್ವಜನಿಕರ ಕುಂದು ಕೊರತೆ ಹಾಗೂ ದೂರುಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಕ್ಕೆ ಅನುಕೂಲವಾಗುವ ಉದ್ದೇಶಕ್ಕಾಗಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜೂನ್ 18 ರಂದು ಮಧ್ಯಾಹ್ನ 12 ರಿಂದ 1 ಗಂಟೆವರೆಗೂ ಫೋನ್ ಇನ್ ನೇರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲಾ ಪೊಲೀಸ್ ಕಚೇರಿಯ ಸ್ಥಿರ ದೂರವಾಣಿ ಸಂಖ್ಯೆ 08532– 235001 ಸಂಖ್ಯೆಗೆ ಕರೆ ಮಾಡಿ ಸಾರ್ವಜನಿಕರು ತಮ್ಮ ದೂರುಗಳನ್ನು ಹೇಳಿಕೊಳ್ಳಬಹುದಾಗಿದೆ. ಜುಲೈನಿಂದ ಪ್ರತಿ ತಿಂಗಳು 1ನೇ ದಿನಾಂಕದಂದು ಮಧ್ಯಾಹ್ನ 12 ರಿಂದ 1 ರವರೆಗೂ ನೇರ ಫೋನ್ ಇನ್ ಕಾರ್ಯಕ್ರಮ ಮುಂದುವರಿಯುತ್ತದೆ. ಸಾರ್ವಜನಿಕರು ಕರೆ ಮಾಡಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.