
ಮಾನ್ವಿ: ‘ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಸಿವಿಲ್ ನ್ಯಾಯಾಧೀಶ ಆನಂದ ಎಚ್ ಕಣ್ಣೂರು ಹೇಳಿದರು.
ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪುರಸಭೆ ಕಾರ್ಯಾಲಯ, ತಾಲ್ಲೂಕು ಕಾನೂನು ಸೇವಾ ಸಮಿತಿ ತಾಲ್ಲೂಕು ವಕೀಲರ ಸಂಘ ಹಾಗೂ ಸಂಕಲ್ಪ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಚೇತನರು ಸರ್ಕಾರದ ಉದ್ಯೋಗ ಹಾಗೂ ವಿವಿಧ ಸೌಲಭ್ಯಗಳು, ಸ್ಥಳೀಯ ನ್ಯಾಯಾಲಯದ ಉಚಿತ ಕಾನೂನು ನೆರವು ಪಡೆದುಕೊಳ್ಳಬೇಕು' ಎಂದು ಅವರು ಸಲಹೆ ನೀಡಿದರು.
ರಾಘವೇಂದ್ರ ವಿಶೇಷ ಉಪನ್ಯಾಸ ನೀಡಿದರು.
ಪುರಸಭೆಯ ಅಧ್ಯಕ್ಷ ಮೀನಾಕ್ಷಿ ರಾಮಕೃಷ್ಣ, ಮುಖ್ಯಾಧಿಕಾರಿ ಪರಶುರಾಮ ದೇವಮಾನೆ, ತಾಲ್ಲೂಕು ಪಂಚಾಯಿತಿ ಇಒ ಖಾಲಿದ್ ಅಹ್ಮದ್, ಪಿಎಸ್ಐ ಅಜ್ಮೀರ್ ಖುರೇಶಿ, ವಕೀಲರ ಸಂಘದ ಅಧ್ಯಕ್ಷ ರವಿಕುಮಾರ ಪಾಟೀಲ, ಸಂಕಲ್ಪ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಪರಶುರಾಮ ಬಾಗಲವಾಡ, ಚನ್ನಬಸವ ನಾಯಕ ಬಲ್ಲಟಗಿ, ಲಕ್ಷ್ಮೀದೇವಿ ನಾಯಕ, ಚಂದ್ರು ನಾಯಕ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.