ಮಾನ್ವಿ: ‘ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಡಿಮೆ ಮಾಡಿ, ಪರಿಸರಕ್ಕೆ ಪೂರಕವಾದ ವಸ್ತುಗಳಿಂದ ತಯಾರಿಸಿದ ವಸ್ತುಗಳನ್ನು ಹೆಚ್ಚಾಗಿ ಬಳಸಬೇಕು’ ಅರಣ್ಯಾಧಿಕಾರಿ ಕೆಂಚಪ್ಪ ಹಂಚಿನಾಳ್ ಎಂದು ಹೇಳಿದರು.
ಪಟ್ಟಣದ ಲೊಯೋಲ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಲೊಯೋಲ ಸಮಾಜ ಸೇವಾ ಕೇಂದ್ರ ಹಾಗೂ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
' ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ. ಈ ನಿಟ್ಟಿನಲ್ಲಿ ಜನಜಾಗೃತಿ ಅಗತ್ಯ' ಎಂದರು.
ರಾಜ್ಯ ಸಂಪನ್ಮೂಲ ವ್ಯಕ್ತಿಗ ಸಿ.ಪಿ.ಓದಿಸೋಮಠ ಅವರು 'ಶಾಲಾ ಶಿಕ್ಷಣದಲ್ಲಿ ಸಮುದಾಯದ ಭಾಗವಹಿಸುವಿಕೆ ಹಾಗೂ ಎಸ್.ಡಿ.ಎಮ್.ಸಿಗಳ ಪಾತ್ರ' ಕುರಿತು ವಿಶೇಷ ಉಪನ್ಯಾಸ ನೀಡಿದರು.
ಫಾದರ್ ಮ್ಯಾಕ್ಸಿಂ ರಸ್ಕೀನ್ಹಾ ಎಸ್.ಜೆ. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಲೊಯೋಲ ಸಮಾಜ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಫಾದರ್ ಜಾರ್ಜ್ ಎಸ್.ಜೆ, ಲೊಯೋಲ ಪದವಿ ಪೂರ್ವ ಕಾಲೇಜ ಪ್ರಾಚಾರ್ಯ ಫಾದರ್ ಪ್ರವೀಣ್ ಕುಮಾರ, ಎಸ್.ಜೆ. ಜನಶಕ್ತಿ ಒಕ್ಕೂಟದ ಅಧ್ಯಕ್ಷೆ ಗಂಗಮ್ಮ, ಎನ್.ಬಸವರಾಜ, ಏಲಿಯಾಸ್ ಹಾಗೂ ತಾಲೂಕಿನ ವಿವಿಧ ಗ್ರಾಮಗಂಳಿಂದ ಆಗಮಿಸಿದ್ದ ಸ್ವ-ಸಹಾಯ ಸಂಘದ ಪ್ರತಿನಿಧಿಗಳು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.