ADVERTISEMENT

‘ಕೊನೆಯ ಪುಟದ ಸಾಲು’ ಕವನ ಸಂಕಲನ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 12:31 IST
Last Updated 9 ಜನವರಿ 2022, 12:31 IST
ಸಿಂಧನೂರು ತಾಲ್ಲೂಕಿನ ಎಲೆಕೂಡ್ಲಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ದುರುಗಪ್ಪ ಗುಡದೂರು ಅವರ ‘ಕೊನೆಯ ಪುಟದ ಸಾಲು’ ಚೊಚ್ಚಲ ಕವನ ಸಂಕಲನವನ್ನು ಬೆಂಗಳೂರಿನಲ್ಲಿ ಸಾಹಿತಿ ಡಾ.ಹಂಪಾ ನಾಗರಾಜಯ್ಯ ಹಾಗೂ ಚಿತ್ರಗೀತೆಗಳ ರಚನೆಕಾರ ಜಯಂತ್ ಕಾಯ್ಕಿಣಿ ಅವರು ಲೋಕಾರ್ಪಣೆ ಮಾಡಿದರು 

ಸಿಂಧನೂರು: ಸಿಂಧನೂರು ತಾಲ್ಲೂಕಿನ ಎಲೆಕೂಡ್ಲಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹಾಗೂ ಯುವ ಬರಹಗಾರ ದುರುಗಪ್ಪ ಗುಡದೂರು ಅವರ ‘ಕೊನೆಯ ಪುಟದ ಸಾಲು’ ಚೊಚ್ಚಲ ಕವನ ಸಂಕಲನವನ್ನು ಬೆಂಗಳೂರಿನಲ್ಲಿ ಶುಕ್ರವಾರ ಲೋಕಾರ್ಪಣೆ ಮಾಡಲಾಯಿತು.

ಬೆಂಗಳೂರಿನ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಹಾಗೂ ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಶಿಕ್ಷಕ ದುರುಗಪ್ಪ ಗುಡದೂರು ಅವರ ‘ಕೊನೆಯ ಪುಟದ ಸಾಲು’ ಕೃತಿಯನ್ನುಸಾಹಿತಿ ಡಾ.ಹಂಪಾ ನಾಗರಾಜಯ್ಯ ಹಾಗೂ ಚಿತ್ರಸಾಹಿತಿ ಜಯಂತ್ ಕಾಯ್ಕಿಣಿ ಲೋಕಾರ್ಪಣೆ ಮಾಡಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್.ನಂದೀಶ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಕೆ.ಬಿ.ಕಿರಣಸಿಂಗ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಕಾರ್ಯಕ್ರಮದಲ್ಲಿ ರಾಜ್ಯದ 55 ಯುವ ಬರಹಗಾರರಿಗೆ ಪ್ರಶಸ್ತಿ ವಿತರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.