ADVERTISEMENT

ರಾಯಚೂರು | ಕೋವಿಡ್ ದೃಢವಾಗಿದ್ದ ಹೆಡ್‌ ಕಾನ್‌ಸ್ಟೇಬಲ್‌ ಸಾವು

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 7:32 IST
Last Updated 29 ಜುಲೈ 2020, 7:32 IST
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಹೆಡ್ ಕಾನ್‌ಸ್ಟೇಬಲ್‌ ರಾಘವೇಂದ್ರ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಹೆಡ್ ಕಾನ್‌ಸ್ಟೇಬಲ್‌ ರಾಘವೇಂದ್ರ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.   

ರಾಯಚೂರು: ಕೋವಿಡ್ ದೃಢವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಗ್ರಾಮೀಣ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಗ್ರಾಮೀಣ ಠಾಣೆಗೆ ಭೇಟಿಕೊಟ್ಟರು. ಇದೇವೇಳೆ ರಾಘವೇಂದ್ರ ಅವರಿಗೆ ಪೊಲೀಸರು ಶ್ರದ್ಧಾಂಜಲಿ ಸಲ್ಲಿಸಿದರು.

‘ರಾಘವೇಂದ್ರ ಅವರು ಸಹೃದಯಿ. ಎಲ್ಲರನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆಯಿಂದ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಇಂತಹ ವ್ಯಕ್ತಿಯ ಮರಣ ನಿಜಕ್ಕೂ ಇಲಾಖೆಗೆ ನೋವುಂಟು ಮಾಡಿದೆ’ಎಂದು ಡಾ.ವೇದಮೂರ್ತಿ ತಿಳಿಸಿದರು.

ADVERTISEMENT

‘ಸಿಬ್ಬಂದಿ ಹೆದರುವ ಅವಶ್ಯಕತೆ ಇಲ್ಲ. ಕೊರೊನಾ ಸೋಂಕು ಹರಡದಂತೆ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಿ’ಎಂದು ಹೇಳಿದರು.

ರಾಘವೇಂದ್ರ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಹಾಗೂ ಮಧುಮೇಹ ಕಾಯಿಲೆಗಳು ಇದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.