ರಾಯಚೂರು: ನಗರದ ವಾರ್ಡ್ ಸಂಖ್ಯೆ 2ರ ರಾಗಿಮಾನಗಡ್ಡ ಟ್ರಿನಿಟಿ ಮೆಥೋಡಿಸ್ಟ್ ಚರ್ಚ್ ಹಿಂಬದಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನ ಕಾಮಗಾರಿ ಅಂದಾಜು ಪತ್ರಿಕೆಯಂತೆ ನಡೆಯುತ್ತಿಲ್ಲ. ಕಾಮಗಾರಿಯೂ ಕಳಪೆಯಾಗಿದೆ ಎಂದು ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಬಣ) ಜಿಲ್ಲಾಡಳಿತಕ್ಕೆ ದೂರು ನೀಡಿದೆ.
ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿ, ಸಮುದಾಯ ಭವನದ ಕಾಮಗಾರಿ ನಿರ್ಮಿತಿ ಕೇಂದ್ರದಿಂದ ಮಾಡುತ್ತಿದ್ದು, ಕಿರಿಯ ಎಂಜಿನಿಯರ್ ಮೆಹಬೂಬ್ ಮುಲ್ಲಾ ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ಕೂಡಲೇ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ, ಆಂಜಿನಯ್ಯ ಕೆ. ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.