ADVERTISEMENT

ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಲಿ : ಶಾಸಕ ಜಿ.ಹಂಪಯ್ಯ ನಾಯಕ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 15:38 IST
Last Updated 27 ಆಗಸ್ಟ್ 2024, 15:38 IST
ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಜಿ.ಹಂಪಯ್ಯ ನಾಯಕ ವಾಲಿಬಾಲ್ ಎಸೆಯುವ ಮೂಲಕ ಚಾಲನೆ ನೀಡಿದರು.
ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಜಿ.ಹಂಪಯ್ಯ ನಾಯಕ ವಾಲಿಬಾಲ್ ಎಸೆಯುವ ಮೂಲಕ ಚಾಲನೆ ನೀಡಿದರು.   

ಸಿರವಾರ: ‘ವಿದ್ಯಾಭ್ಯಾಸದ ಜೊತೆಗೆ ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಳ್ಳುವುದನ್ನು ರೂಢಿಸಿಕೊಳ್ಳಿ‘ ಎಂದು ಶಾಸಕ ಜಿ.ಹಂಪಯ್ಯ ನಾಯಕ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಪ್ರಾರಂಭವಾದ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಬಡ್ಡಿ ಬಾಲಕಿಯರ ಪಂದ್ಯಾವಳಿಯಲ್ಲಿ ಸರ್ಕಾರಿ ಪಿಯು ಕಾಲೇಜು ಸಿರವಾರ ಪ್ರಥಮ, ಸ್ವಾಮಿ ವಿವೇಕಾನಂದ ಪಿಯು ಕಾಲೇಜು ಸಿರವಾರ ದ್ವಿತೀಯ, ಬಾಲಕರ ಕಬಡ್ಡಿ ಪಂದ್ಯಾವಳಿಯಲ್ಲಿ ಸರ್ಕಾರಿ ಪಿಯು ಕಾಲೇಜು ಕಲ್ಲೂರು ಪ್ರಥಮ, ಸರ್ಕಾರಿ ಪಿಯು ಕಾಲೇಜು ಸಿರವಾರ ದ್ವಿತೀಯ, ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಸರ್ಕಾರಿ ಪಿಯು ಕಾಲೇಜು ಕುರಕುಂದಾ ಪ್ರಥಮ, ಪಿಯು ಕಾಲೇಜು ಬಲ್ಲಟಗಿ ದ್ವಿತೀಯ, ಬಾಲಕರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಸರ್ಕಾರಿ ಪಿಯು ಕಾಲೇಜು ಬಾಗಲವಾಡ, ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಿಯು ಕಾಲೇಜು ಬಲ್ಲಟಗಿ ಪ್ರಥಮ, ಸ್ವಾಮಿ ವಿವೇಕಾನಂದ ಕಾಲೇಜು ಸಿರವಾರ ದ್ವಿತೀಯ ಸ್ಥಾನ ಪಡೆದರು.

ADVERTISEMENT

ತಹಶೀಲ್ದಾರ್ ರವಿ ಎಸ್. ಅಂಗಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಬ್ರಿಜೇಶ ಪಾಟೀಲ, ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ವೆಂಕಟೇಶ, ಅಮರೇಗೌಡ ಬಯ್ಯಾಪೂರು ಕಾಲೇಜು ಪ್ರಾಚಾರ್ಯ ಅಮರೇಶಗೌಡ ನಂದರೆಡ್ಡಿ, ಉಪನ್ಯಾಸಕ ಹನುಮಂತ ಚನ್ನೂರು, ಮುಖಂಡರಾದ ರಮೇಶ ದರ್ಶನಕರ್, ಶಿವಶರಣ ಅರಕೇರಿ, ನಾಗರಾಜ ಚಿನ್ನಾನ್, ಗಡ್ಲ ಬಸವರಾಜ ಭಾಗವಹಿಸಿದ್ದರು.

ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಸಿರವಾರ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.