ADVERTISEMENT

ರಾಯಚೂರು: ಏಜೆಂಟರಿಗೆ ಪಿಪಿಇ ಕಿಟ್ ‘ಸಂಕಟ’

​ಪ್ರಜಾವಾಣಿ ವಾರ್ತೆ
Published 3 ಮೇ 2021, 4:14 IST
Last Updated 3 ಮೇ 2021, 4:14 IST
ರಾಯಚೂರಿನ ಎಸ್‌ಆರ್‌ಪಿಎಸ್‌ ಕಾಲೇಜಿನಲ್ಲಿ ಭಾನುವಾರ ನಡೆದ ಮಸ್ಕಿ ಉಪಚುನಾವಣೆ ಮತ ಎಣಿಕೆ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿದವರಿಗೆಲ್ಲ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು
ರಾಯಚೂರಿನ ಎಸ್‌ಆರ್‌ಪಿಎಸ್‌ ಕಾಲೇಜಿನಲ್ಲಿ ಭಾನುವಾರ ನಡೆದ ಮಸ್ಕಿ ಉಪಚುನಾವಣೆ ಮತ ಎಣಿಕೆ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿದವರಿಗೆಲ್ಲ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು   

ರಾಯಚೂರು: ಮತ ಎಣಿಕೆ ಕೇಂದ್ರದಲ್ಲಿ ಅಭ್ಯರ್ಥಿಗಳ ಚುನಾವಣಾ ಏಜೆಂಟರಿಗೆ ಪಿಪಿಇ ಕಿಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು.

ಜಿಲ್ಲಾ ಚುನಾವಣಾಧಿಕಾರಿ ಮೊದಲೇ ಸಭೆ ನಡೆಸಿ ಸೂಚನೆ ನೀಡಿದ್ದರು. ಮತ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದ 210 ಸಿಬ್ಬಂದಿಗೆ ಕೋವಿಡ್ ತಪಾಸಣೆ ನಡೆಸಿ, ನೆಗೆಟಿವ್‌ ಇದ್ದವರನ್ನು ಮಾತ್ರ ನಿಯೋಜಿಸಲಾಗಿತ್ತು.

ಪಿಪಿಇ ಕಿಟ್‌ ಧರಿಸಿದ್ದ ಕೆಲವರು ತಾಪ ಹೆಚ್ಚಾಗಿದ್ದರಿಂದ ಸಂಕಷ್ಟ ತಾಳಲಾರದೆ ಕಿತ್ತೆಸೆದಿದ್ದರು. ಮತ ಎಣಿಕೆ ಕೇಂದ್ರದಲ್ಲಿ ಏಜೆಂಟರು ಮಾತ್ರ ಪಿಪಿಇ ಕಿಟ್‌ ಧರಿಸಿದ್ದರು.

ADVERTISEMENT

ಅರ್ಧದಲ್ಲೇ ಹೊರ ನಡೆದ ಪ್ರತಾಪಗೌಡ
ರಾಯಚೂರು:
ಮಸ್ಕಿ ವಿಧಾನಸಭಾ ಉಪಚುನಾವಣೆ ಮತದಾನ ಎಣಿಕೆ ಪ್ರಕ್ರಿಯೆ ಭರದಿಂದ ನಡೆಯುತ್ತಿದ್ದ ವೇಳೆಯಲ್ಲಿಯೇ ಸೋಲುವುದು ನಿಶ್ಚಿತ ‌ಎನ್ನುವುದನ್ನು ಅರಿತು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಹೊರನಡೆದರು.

ಮಾಧ್ಯಮದವರು ಎದುರಾಗುತ್ತಿದ್ದಂತೆ ಶೌಚಾಲಯಕ್ಕೆ ಹೋಗಿ ಬರುವುದಾಗಿ ಸಮಜಾಯಿಸಿ ಕೊಟ್ಟು ತೆರಳಲು ಪ್ರಯತ್ನಿಸಿದರು. ಬಳಿಕ ಅವರು ಅನಿವಾರ್ಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.