ADVERTISEMENT

ವೀರಶೈವ ಸಮಾಜ: ಪ್ರತಿಭಾ ಪುರಸ್ಕಾರ ನಾಳೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2020, 12:21 IST
Last Updated 3 ಜನವರಿ 2020, 12:21 IST

ರಾಯಚೂರು: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜನವರಿ 5 ರಂದು ಪ್ರತಿಭಾವಂತ ಜಿಲ್ಲಾ ವೀರಶೈವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಮಹಾಸಭಾದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಚಂದ್ರಶೇಖರ ಪಾಟೀಲ ಮಿರ್ಜಾಪುರ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕಗಳಿಸಿದ ಜಿಲ್ಲೆಯ ವೀರಶೈವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಹೇಳಿದರು.

ವೀರಶೈವ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮತ್ತು ಉಪಾಧ್ಯಕ್ಷ ಎನ್.ತಿಪ್ಪಣ್ಣ ಅವರು ಉದ್ಘಾಟಿಸುವರು. ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಭಾಗವಹಿಸುವರು. ಕಿಲ್ಲೆಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಹಾಗೂ ಸೋಮವಾರಪೇಟೆ ಹಿರೇಮಠದ ಶ್ರೀ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ತಿಳಿಸಿದರು.

ADVERTISEMENT

ಶಾಸಕರಾದ ಡಾ.ಶಿವರಾಜ ಪಾಟೀಲ, ವೆಂಕಟರಾವ್ ನಾಡಗೌಡ, ಪರಣ್ಣ ಮುನವಳ್ಳಿ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಪಾಟೀಲ ಇಟಗಿ, ಶರಣಪ್ಪ ಮಟ್ಟೂರು, ಚಂದ್ರಶೇಖರ ಪಾಟೀಲ, ವೀರಶೈವ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವೀರನಗೌಡ ಆಗಮಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ, ಸಹಾಯಕ ಆಯುಕ್ತ ಸಂತೋಷ ಕಾಮಗೌಡರ ಭಾಗವಹಿಸುವರು ಎಂದು ತಿಳಿಸಿದರು.

ಮಹಾಸಭಾದ ಪದಾಧಿಕಾರಿಗಳಾದ ಜಿ. ನೀಲಕಂಠಯ್ಯ, ಬಸವರಾಜ ಯಾಪಲದಿನ್ನಿ ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.