ADVERTISEMENT

ಪಿಯು ಪರೀಕ್ಷೆ: ಸಿರವಾರದಲ್ಲಿ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 6:52 IST
Last Updated 26 ಫೆಬ್ರುವರಿ 2026, 6:52 IST
ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಪರೀಕ್ಷೆಯ ಮುಖ್ಯ ಅಧೀಕ್ಷಕ ಹನುಮಂತ ಚನ್ನೂರು ಮಾತನಾಡಿದರು
ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಪರೀಕ್ಷೆಯ ಮುಖ್ಯ ಅಧೀಕ್ಷಕ ಹನುಮಂತ ಚನ್ನೂರು ಮಾತನಾಡಿದರು   

ಸಿರವಾರ: ಫೆ.28 ರಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು ಯಾವುದೇ ಅಕ್ರಮ ನಡೆಯದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಪರೀಕ್ಷೆಯ ಮುಖ್ಯ ಅಧೀಕ್ಷಕ ಹನುಮಂತ ಚನ್ನೂರು ಸೂಚಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ದ್ವಿತೀಯ ಪಿಯು ವಾರ್ಷಿಕ
ಪರೀಕ್ಷೆಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಕೊಠಡಿಗಳಿಗೆ ಮೂಲ ಸೌಕರ್ಯಗಳು ಸೇರಿದಂತೆ ಕುಳಿತುಕೊಳ್ಳುವ ಆಸನ ವ್ಯವಸ್ಥೆ, ಅಕ್ರಮ ನಡೆಯದಂತೆ ತಡೆಯಲು ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು  ಮೇಲ್ವಿಚಾರಕರು ವಿದ್ಯಾರ್ಥಿಗಳು ಕೊಠಡಿ ಬರುವ ಮೊದಲು ಪರೀಕ್ಷೆಗೆ ಬೇಕಾದ ವಸ್ತುಗಳನ್ನು ಬಿಟ್ಟು ಮೊಬೈಲ್ ಸೇರಿದಂತೆ ಯಾವುದೇ ವಸ್ತಗಳನ್ನು ಒಳಗೆ ತರದಂತೆ ನೋಡಿಕೊಳ್ಳಬೇಕು ಎಂದರು.

ADVERTISEMENT

ಪರೀಕ್ಷೆ ಅಧೀಕ್ಷಕ ಮಹಮ್ಮದ್ ಫರೀದ್ ಅಹ್ಮದ್, ಪರೀಕ್ಷೆ ಉತ್ತರಪತ್ರಿಕೆಗಳ ಪಾಲಕ ಜಯಪ್ಪ, ಪರೀಕ್ಷೆ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಲಿರುವ ಕಾಲೇಜಿನ ಉಪನ್ಯಾಸಕರು, ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.