ಸಿಂಧನೂರು: ತಾಲ್ಲೂಕಿನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತು ಜನಜಾಗೃತಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯಡಿ ಆಟೋ ಪ್ರಚಾರದ ಜನಜಾಗೃತಿ ಸಂಚಾರಿ ವಾಹನಕ್ಕೆ ಸ್ಥಳೀಯ ಸಿವಿಲ್ ಪ್ರಧಾನ ನ್ಯಾಯಾಧೀಶೆ ರೂಪಾ ಸಿ.ವಗ್ಗಾ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ‘ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಸಹಕಾರ ನೀಡಬೇಕು. ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದರು.
ಈ ವೇಳೆ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸರಸ್ವತಿ ಒಟೆಕರ್, ವಕೀಲರ ಸಂಘದ ಅಧ್ಯಕ್ಷ ಎನ್.ರಾಮನಗೌಡ, ವಕೀಲರಾದ ಉರುಕುಂದಪ್ಪ, ಎಸ್‍ಎಚ್‍ಪಿ ಖಾದ್ರಿ, ಯು.ಬಸವಂತರಾವ್, ಹನುಮಂತಪ್ಪ ಸೇರಿದಂತೆ ಕಾರ್ಮಿಕ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.