
ಸಿಂಧನೂರು: ಇಲ್ಲಿನ ನಗರಸಭೆಯ ಹಂಗಾಮಿ ಅಧ್ಯಕ್ಷರಾಗಿ ಬುಧವಾರ ಉಪಾಧ್ಯಕ್ಷೆ ಮಂಜುಳಾ ಪ್ರಭುರಾಜ್ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು ‘ಪ್ರಸ್ತುತ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುತ್ತೇನೆ. ಸ್ವಚ್ಛ, ಸುಂದರ ನಗರ ನಿರ್ಮಾಣದ ಜತೆ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಅನುಮತಿ ಪಡೆದು ಶುಲ್ಕ ಪಾವತಿಸುವವರಿಗೆ ಮಾತ್ರ ಬ್ಯಾನರ್, ಪೆಕ್ಸ್ ಹಾಕಲು ಅವಕಾಶ ನೀಡಲಾಗುವುದು. ಶಾಸಕ ಹಂಪನಗೌಡ ಬಾದರ್ಲಿ ಅವರ ಮಾರ್ಗದರ್ಶನದಲ್ಲಿ ಎಲ್ಲ ಸದಸ್ಯರ, ಅಧಿಕಾರಿಗಳ ಸಹಕಾರದೊಂದಿಗೆ ಆಡಳಿತ ನಡೆಸಲಾಗುವುದು’ ಎಂದು ಹೇಳಿದರು.
ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ, ನಗರಸಭೆ ಮಾಜಿ ಅಧ್ಯಕ್ಷ ಸೈಯ್ಯದ್ ಜಾಫರ್‍ಅಲಿ ಜಾಗೀರದಾರ್, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ಕಾಳಿಂಗಪ್ಪ ವಕೀಲ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವೀರೇಶ ಹಟ್ಟಿ, ವ್ಯವಸ್ಥಾಪಕಿ ರೇಖಾ, ಸದಸ್ಯರಾದ ಶೇಖರಪ್ಪ ಗಿಣಿವಾರ, ಶಬ್ಬೀರ್ ಅಹ್ಮದ್, ಆಲಂಸಾಬ, ಶರಣಪ್ಪ ಉಪ್ಪಲದೊಡ್ಡಿ, ಸಣ್ಣವೀರಭದ್ರಪ್ಪ ಕುರುಕುಂದಿ ಸೇರಿದಂತೆ ನಗರದ ಪ್ರಮುಖರು, ಗಣ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.