ADVERTISEMENT

ಶಾಂಭವಿ ದೇವಿಯ ಭಾವಚಿತ್ರದ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2022, 12:58 IST
Last Updated 5 ಅಕ್ಟೋಬರ್ 2022, 12:58 IST
ಮಾನ್ವಿ ತಾಲ್ಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಬುಧವಾರ ವಿಜಯದಶಮಿ ಪ್ರಯುಕ್ತ ಶಾಂಭವಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಿತು
ಮಾನ್ವಿ ತಾಲ್ಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಬುಧವಾರ ವಿಜಯದಶಮಿ ಪ್ರಯುಕ್ತ ಶಾಂಭವಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಿತು   

ಮಾನ್ವಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧಡೆ ವಿಜಯದಶಮಿಯನ್ನು ಬುಧವಾರ ಶ್ರದ್ಧೆ, ಭಕ್ತಿಯಿಂದ ಆಚರಿಸಲಾಯಿತು. ಶ್ರೀದೇವಿ ದೇವಸ್ಥಾನ, ಬನ್ನಿ ಮಹಾಕಾಳಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಯಿತು.

ತಾಲ್ಲೂಕಿನ ಬ್ಯಾಗವಾಟ ಗ್ರಾಮದ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಭ್ರಮರಾಂಬ ದೇವಿಗೆ ಅಭಿಷೇಕ, ಕುಂಕುಮಾರ್ಚನೆ ಮತ್ತು ಮಹಾಮಂಗಳಾರತಿ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂಭವಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಿತು.

ಗ್ರಾಮದ ಮಹಿಳೆಯರು ತುಂಗಭದ್ರ ಕಾಲುವೆಯಲ್ಲಿ ಗಂಗೆ ಪೂಜೆ ನೆರವೇರಿಸಿ ಕುಂಭ ಕಳಸಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ನಂತರ ಮಹಿಳೆಯರು ರಥ ಎಳೆಯುವ ಮೂಲಕ ರಥೋತ್ಸವ ನಡೆಯಿತು. ಮಾಜಿ ಶಾಸಕ ಬಸನಗೌಡ ಬ್ಯಾಗವಾಟ ಸೇರಿದಂತೆ ಗ್ರಾಮದ ಗಣ್ಯರು ಭಾಗವಹಿಸಿದ್ದರು.

ADVERTISEMENT

ಮಾನ್ವಿ ಪಟ್ಟಣದ ಕಲ್ಮಠದಲ್ಲಿ ವಿಜಯ ದಶಮಿ ಪ್ರಯುಕ್ತ ಮಹಿಳೆಯರು ಶ್ರೀದೇವಿಯ ರಜತ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಬನ್ನಿ ಮರಕ್ಕೆ ಮಹಿಳೆಯರು ಪೂಜೆ ಸಲ್ಲಿಸಿದರು. ಮಂಗಳವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಯನಗರದ ಸಂಗಾಪುರ ಕಿದ್ಮತ್ ಹಿರೇಮಠದ ಶಾಖಾ ಮಠದಲ್ಲಿ ಶ್ರೀದೇವಿ ಪುರಾಣ ಮಹಾಂಗಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಭದ್ರಯ್ಯ ಸ್ವಾಮಿ ಸಂಗಾಪುರ, ಕಿಡಿಗಣ್ಣಯ್ಯ ಸ್ವಾಮಿ ಉಮಳಿಹೊಸೂರು, ಎ.ಬಿ.ಉಪ್ಪಳಮಠ ವಕೀಲ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.