ADVERTISEMENT

ರಮೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 2:16 IST
Last Updated 2 ಆಗಸ್ಟ್ 2022, 2:16 IST
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಶ್ರೀನಿವಾಸ ಚಾಪೆಲ್ ಅವರಿಗೆ ಮನವಿ ಸಲ್ಲಿಸಿದರು
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಶ್ರೀನಿವಾಸ ಚಾಪೆಲ್ ಅವರಿಗೆ ಮನವಿ ಸಲ್ಲಿಸಿದರು   

ದೇವದುರ್ಗ: ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಶಾಸಕ ರಮೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪತ್ರಕರ್ತರುಪ್ರತಿಭಟನೆನಡೆಸಿದರು.

ಬಳಿಕ ತಹಶೀಲ್ದಾರ್ ಶ್ರೀನಿವಾಸ್ ಚಾಪೆಲ್ ಅವರಿಗೆ ಮನವಿ ಸಲ್ಲಿಸಿದರು.

ಪತ್ರಕರ್ತ ರಂಗಣ್ಣ ಪಾಟೀಲ ಅಳ್ಳುಂಡಿ ಮಾತನಾಡಿ,‘ರಮೇಶ್ ಕುಮಾರ್ ಹಿರಿಯ ರಾಜಕಾರಣಿಯಾಗಿದ್ದಾರೆ. ಅವರು ಈ ರೀತಿ ನಡೆದುಕೊಳ್ಳುತ್ತಿರುವುದು ಖಂಡನೀಯ’ ಎಂದು ಹೇಳಿದರು.

ADVERTISEMENT

ಸರ್ಕಾರ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಾಬು ಅಲಿ ಕರಿಗುಡ್ಡ, ನರಸಿಂಗ್ ರಾವ್ ಸರಕಿಲ್, ಬೆಳ್ಳೆಪ್ಪ ಬಲ್ಲಿದವ, ಅಮರೇಶ ಚಿಲ್ಕರಾಗಿ, ರವಿ ಪಾಟೀಲ ಅಳ್ಳುಂಡಿ, ನಾಗರಾಜ ತೇಲ್ಕರ್, ಮಾರ್ಖಂಡಯ್ಯ, ಸುರೇಶ ಗೌಡ, ಬಂದೆನವಾಜ್, ಯಮನೇಶ ಗೌಡಗೇರಾ, ಶಿವಕುಮಾರ ಛಲವಾದಿ ಹಾಗೂ ಸುರೇಶ್ ಭವಾನಿ ಸೇರಿ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.