ADVERTISEMENT

ರಾಯಚೂರು: ’ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹಾರ ನಡೆಯಲಿ'

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 12:55 IST
Last Updated 14 ಸೆಪ್ಟೆಂಬರ್ 2021, 12:55 IST
ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಪದಾಧಿಕಾರಿಗಳು ರಾಯಚೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯ ಶಾಖೆಯ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು
ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಪದಾಧಿಕಾರಿಗಳು ರಾಯಚೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯ ಶಾಖೆಯ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ಬ್ಯಾಂಕಿನಲ್ಲಿ ಗ್ರಾಹಕರ ಮೇಲಾಗುತ್ತಿರುವ ಹಿಂದಿ ಹೇರಿಕೆ ಮತ್ತು ದೌರ್ಜನ್ಯವನ್ನು ನಿಲ್ಲಿಸಿ ಎಲ್ಲಾ ಸೇವೆಯನ್ನು ಕನ್ನಡದಲ್ಲಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯ ಶಾಖೆಯ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಆನಂತರ ಬ್ಯಾಂಕಿನ ವ್ಯಾವಸ್ಥಾಪಕರಿಗೆ ಮನವಿ ಸಲ್ಲಿಸಿದರು.ಕೇಂದ್ರ ಸರ್ಕಾರ ಪ್ರತಿವರ್ಷ ಸೆಪ್ಟೆಂಬರ್ 14ರಂದು ನಮ್ಮ ತೆರಿಗೆಯ ಹಣದಲ್ಲಿ ಹಿಂದಿ ದಿವಸ್ ಆಚರಣೆ ಮಾಡುತ್ತಾ ಬಂದಿದೆ. ಈ ಮೂಲಕ ಎಲ್ಲಾ ಭಾಷೆಗಳನ್ನು ಕಡೆಗಣಿಸುತ್ತಿದೆ. ಬ್ಯಾಂಕುಗಳಲ್ಲಿ ಕನ್ನಡದಲ್ಲಿ ಸೇವೆ ನೀಡದಿರುವುದು ಹಿಂದಿ ಭಾಷೆಯಲ್ಲಿ ಮಾತನಾಡುವಂತೆ ಗ್ರಾಹಕರನ್ನು ಒತ್ತಾಯಿಸುವ ಅನೇಕ ಪ್ರಕರಣಗಳು ನಡೆಯುತ್ತಿವೆ. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಹೆಚ್ಚಾಗಿದೆ. ಗ್ರಾಹಕರ ಮೇಲೆ ಆಗುತ್ತಿರುವ ಹಿಂದಿ ಹೇರಿಕೆಯನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಬ್ಯಾಂಕಿನ ಎಲ್ಲ ವ್ಯವಹಾರಗಳನ್ನು ಸುಲಭವಾಗಿ ಕನ್ನಡದಲ್ಲಿ ನಡೆಸಲು ಕನ್ನಡಿಗರನ್ನು ಬ್ಯಾಂಕಿನ ಉದ್ಯೋಗಿಗಳಾಗಿ ನೇಮಿಸಬೇಕು. ಕನ್ನಡ ಬಾರದ ಸಿಬ್ಬಂದಿಯನ್ನು ಕೂಡಲೇ ಅವರ ಮಾತೃ ರಾಜ್ಯಗಳಿಗೆ ವರ್ಗಾವಣೆ ಮಾಡಬೇಕು. ಹಿಂದಿ ದಿವಸ್, ಹಿಂದಿ ಸಪ್ತಾಹ, ಹಿಂದಿ ಪಕ್ವಾಡ ಇತ್ಯಾದಿ ಆಚರಣೆಗಳನ್ನು ಕೂಡಲೇ ಕೈಬಿಡಬೇಕು ಎಂದರು.

ADVERTISEMENT

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವಿನೋದ್ ರೆಡ್ಡಿ, ಪದಾಧಿಕಾರಿಗಳಾದ ವಿಷ್ಣು ಪ್ರಸಾದ್, ಕೆ. ಡೊಂಡಪ್ಪ, ಸತ್ಯನಾರಾಯಣ, ಆಂಜಿನಯ್ಯ, ವೆಂಕಟರೆಡ್ಡಿ, ವೆಂಕಟೇಶ ಯಾದವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.