ADVERTISEMENT

ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದುಪಡಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 12:42 IST
Last Updated 17 ನವೆಂಬರ್ 2020, 12:42 IST
ರಾಯಚೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡರ ಬಣ)ಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡರ ಬಣ)ಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು   

ರಾಯಚೂರು: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಪ್ರಾಧಿಕಾರಕ್ಕೆ ₹50 ಕೋಟಿ ಅನುದಾನ ನೀಡಿರುವ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ(ಎಚ್. ಶಿವರಾಮೇಗೌಡರ ಬಣ)ಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಆದೇಶ ಪ್ರತಿ ಹಾಗೂ ಪ‍್ರತಿಕೃತಿ ದಹಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಮರಾಠ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಾರಣ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಆದೇಶ ನೀಡಿ ಪ್ರಾಧಿಕಾರಕ್ಕೆ ₹50 ಕೋಟಿ ಅನುದಾನ ಮೀಸಲಿರಿಸಿದ್ದು ನ್ಯಾಯ ಸಮ್ಮತವಲ್ಲ ಎಂದು ದೂರಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕನ್ನಡಿಗರನ್ನು ಕೀಳು ಮಟ್ಟದಲ್ಲಿ ನೋಡುವ ಮನೋಭಾವವಾಗಿದೆ. ಕನ್ನಡಿಗರ ತೆರಿಗೆ ಹಣ ಕೇವಲ ಕನ್ನಡಿಗರಿಗೆ ಮಾತ್ರ ಸೀಮಿತವಾಗಿದ್ದು, ಕನ್ನಡಿಗರ ಸ್ವಾಭಿಮಾನಕ್ಕೆ ದಕ್ಕೆ ತರುವ ಕೆಲಸವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಮರಾಠರ ಅಭಿವೃದ್ಧಿ ಪ್ರಾಧಿಕಾರಕ್ಕಾಗಿ ನೀಡಿದ ₹50 ಕೋಟಿ ಅನುದಾನವನ್ನು ರಾಜ್ಯದ ಪ್ರವಾಹಕ್ಕೆ ಸಿಲುಕಿ ಸಂಕಷ್ಟಕ್ಕೀಡಾದ ರೈತರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಸರ್ಕಾರ ಈ ಕೂಡಲೇ ಕನ್ನಡ ನಾಡಿನ ಬಗ್ಗೆ ಕಳಕಳಿ, ಗೌರವವಿದ್ದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದುಗೊಳಿಬೇಕು. ಇಲ್ಲದೇ ಹೋದಲ್ಲಿ ರಾಜ್ಯದಾದ್ಯಂತ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಕುಮಾರ ಜೈನ್, ಪದಾಧಿಕಾರಿ ಕೆ.ಗೋವಿಂದರಾಜ, ಮಲ್ಲಿಕಾರ್ಜುನ, ಕಿಶನ ರಾವ, ಆಸೀಫ್, ಸಂಜಯ ವೈಷ್ಣವ, ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.