ADVERTISEMENT

ಅಸಮರ್ಪಕ ಹಂಚಿಕೆ: ಪಡಿತರದಾರರಿಂದ ಪ್ರತಿಭಟನೆ

ಎಲೆ ಬಿಚ್ಚಾಲಿ ನ್ಯಾಯಬೆಲೆ ಅಂಗಡಿ ಕೆರೆಬೂದೂರಿಗೆ ಜೋಡಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2018, 13:47 IST
Last Updated 17 ಡಿಸೆಂಬರ್ 2018, 13:47 IST
ರಾಯಚೂರಿನಲ್ಲಿ ಎಲೆಬಿಚ್ಚಾಲಿ ನ್ಯಾಯಬೆಲೆ ಅಂಗಡಿಯಲ್ಲಿ ಸಮರ್ಪಕವಾಗಿ ಪಡಿತರ ಧಾನ್ಯ ವಿತರಣೆ ಮಾಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಎಲೆಬಿಚ್ಚಾಲಿ ನ್ಯಾಯಬೆಲೆ ಅಂಗಡಿಯಲ್ಲಿ ಸಮರ್ಪಕವಾಗಿ ಪಡಿತರ ಧಾನ್ಯ ವಿತರಣೆ ಮಾಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ತಾಲ್ಲೂಕಿನ ಎಲೆ ಬಿಚ್ಚಾಲಿ ಗ್ರಾಮದ ನ್ಯಾಯಬೆಲೆ ಅಂಗಡಿಯ ಮಾಲೀಕ ಕೆ.ಗೋಪಾಲ ಸಮರ್ಪಕವಾಗಿ ಪಡಿತರ ಧಾನ್ಯ ವಿತರಣೆ ಮಾಡುತ್ತಿಲ್ಲ. ಆದ್ದರಿಂದ ಕೆರೆಬೂದೂರು ಹರಿಶ್ಚಂದ್ರ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ಜೋಡಣೆ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಸೋಮವಾರ ಪ್ರತಿಭಟನೆ ನಡೆಸಿದರು.

ನ್ಯಾಯಬೆಲೆ ಅಂಗಡಿ ಸರಿಯಾಗಿ ನಿರ್ವಹಣೆ ಮಾಡದೇ ಸಾಕಷ್ಟು ಅವ್ಯವಹಾರ ನಡೆಸಿರುವ ಹಿನ್ನೆಲೆಯಲ್ಲಿ ಆಗಿನ ಜಿಲ್ಲಾಧಿಕಾರಿ ನ್ಯಾಯಬೆಲೆ ಅಂಗಡಿ ಪರವಾನಿಗೆ ರದ್ದುಪಡಿಸಿದ್ದರು. ಆದರೆ, ಅವರು ವರ್ಗಾವಣೆಯಾದ ನಂತರ ನ್ಯಾಯಬೆಲೆ ಅಂಗಡಿ ನಿರ್ವಹಣೆ ಮಾಡಲು ಅವಕಾಶ ನೀಡಿ ಪಡಿತರದಾರರಿಗೆ ವಂಚನೆ ಮಾಡಲಾಗುತ್ತಿದೆ. ಈ ಮೂಲಕ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಆರೋಪಿಸಿದರು.

ಗ್ರಾಮದಲ್ಲಿ 450ಕ್ಕೂ ಅಧಿಕ ಪಡಿತರ ಚೀಟಿ ಇದ್ದು, ಪಡಿತರದಾರರಿಗೆ ಕುಂಟುನೆಪ ಹೇಳಿ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ತನಿಖೆಯಲ್ಲಿ ಅವ್ಯವಹಾರ ಸಾಬೀತುಗೊಂಡಿದ್ದರೂ, ಮತ್ತೆ ನ್ಯಾಯಬೆಲೆ ಅಂಗಡಿ ನಿರ್ವಹಣೆಗೆ ಅವಕಾಶ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ನ್ಯಾಯಸಮ್ಮತವಾಗಿ ಪಡಿತರ ವಿತರಣೆ ಮಾಡಲು ಹರಿಶ್ಚಂದ್ರ ಅಥವಾ ಬೇರೆಯವರಿಗೆ ಹೊಣೆ ನೀಡಬೇಕು. ಇಲ್ಲದಿದ್ದರೆ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಕೆ.ಸಿದ್ದಪ್ಪ, ರಮೇಶ, ಹುಸೇನಿ, ಆದೆಪ್ಪ, ಪ್ರಕಾಶ, ಭೀಮೇಶ, ಗಂಗಪ್ಪ, ನಾಗಪ್ಪ, ತಾಯಮ್ಮ, ರುಕ್ಕಮ್ಮ, ಜಮಲಮ್ಮ, ಬಸಮ್ಮ, ಸಣ್ಣ ಈರಣ್ಣ, ಖಾಜಾ, ಲಕ್ಷ್ಮೀ, ಸಂತಮ್ಮ, ಮಲ್ಲಮ್ಮ, ಶಾಂತಮ್ಮ, ಶಂಕ್ರಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.