ADVERTISEMENT

ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಖಂಡನೆ

ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 11:18 IST
Last Updated 9 ಆಗಸ್ಟ್ 2020, 11:18 IST
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಎಐಕೆಕೆಎಸ್‌ ರೈತ ಸಂಘಟನೆಯ ಕಾರ್ಯಕರ್ತರು ಭಾನುವಾರ ಮಸ್ಕಿಯಲ್ಲಿ ಪ್ರತಿಭಟನೆ ನಡೆಸಿದರು
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಎಐಕೆಕೆಎಸ್‌ ರೈತ ಸಂಘಟನೆಯ ಕಾರ್ಯಕರ್ತರು ಭಾನುವಾರ ಮಸ್ಕಿಯಲ್ಲಿ ಪ್ರತಿಭಟನೆ ನಡೆಸಿದರು   

ಮಸ್ಕಿ: ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ (ಎಐಕೆಕೆಎಸ್) ಸಂಘಟನೆ ಕಾರ್ಯಕರ್ತರು ಭಾನುವಾರ ಪಟ್ಟಣದ ಡಾ. ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

1942ರ ಕ್ವಿಟ್ ಇಂಡಿಯಾ ಚಳುವಳಿ ದೇಶದ ಸ್ವಾತಂತ್ರ್ಯಕ್ಕೆ ಅಂತಿಮ ಘಟ್ಟವಾಗಿತ್ತು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಲಕ್ಷಾಂತರ ಹುತಾತ್ಮರ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದೇಶದ ಕಾರ್ಮಿಕ ಹಾಗೂ ರೈತರ ಹಿತ ಬಲಿಕೊಟ್ಟು ಕೇಂದ್ರ ಸರ್ಕಾರ ಕಾರ್ಪೊರೇಟ್‌ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಕೂಡಲೇ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನ ಕೈಬಿಡಬೇಕು ಎಂದು ಒತ್ತಾಯಿಸಿದರು.

ADVERTISEMENT

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ದಿನ್ನಿ, ಮಾರುತಿ ಜಿನ್ನಾಪೂರ, ಪರಶುರಾಮ ಹಿರೇದಿನ್ನಿ, ಮೌನೇಶ ತುಗ್ಗಲದಿನ್ನಿ, ಸಿದ್ದಪ್ಪ ಗೋನಾಳ, ಅಮರೇಶ ಪಾಮನಕೆಲ್ಲೂರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.