ADVERTISEMENT

ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 13:03 IST
Last Updated 29 ಜೂನ್ 2022, 13:03 IST
ಸಿಂಧನೂರಿನಲ್ಲಿ ಭಾನುವಾರ ನಡೆದ ಸಭೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು
ಸಿಂಧನೂರಿನಲ್ಲಿ ಭಾನುವಾರ ನಡೆದ ಸಭೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು   

ಸಿಂಧನೂರು: ‘ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಸ್ಥಾಪಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿ ಸಿಂಧನೂರು ತಾಲ್ಲೂಕು ಏಮ್ಸ್ ಹೋರಾಟ ಸಮಿತಿ ನೇತೃತ್ವದಲ್ಲಿ ಜುಲೈ 1 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು,ಮಠಾಧೀಶರು ಭಾಗವಹಿಸುವರು’ ಎಂದು ಕರಿಬಸವನಗರದ ರಂಭಾಪುರಿ ಖಾಸಾಶಾಖಾ ಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಾದೇಶಿಕ ಅಸಮತೋಲನೆಯಿಂದ ನರಳುತ್ತಿರುವ ರಾಯಚೂರು ಜಿಲ್ಲೆಗೆ ಮೊದಲ ಹಂತದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಐಐಟಿ ಅಂತಹ ರಾಷ್ಟ್ರಮಟ್ಟದ ಉನ್ನತ ಶಿಕ್ಷಣ ಕೇಂದ್ರ ಸ್ಥಾಪಿಸುವ ಮೂಲಕ ಪರಿಹರಿಸಬಹುದಾಗಿದೆ ಎಂದು ಡಾ.ಡಿ.ಎಂ.ನಂಜುಂಡಪ್ಪ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಧಾರವಾಡಕ್ಕೆ ಐಐಟಿ ನೀಡಿ ಜಿಲ್ಲೆಗೆ ದ್ರೋಹ ಬಗೆದಿವೆ. ಆದ್ದರಿಂದ ಏಮ್ಸ್‌ನ್ನು ರಾಯಚೂರಿಗೆ ಮಂಜೂರು ಮಾಡಿ ನ್ಯಾಯ ಒದಗಿಸಬೇಕು’ ಎಂದು ಸಮುದಾಯ ಪ್ರಧಾನ ಕಾರ್ಯದರ್ಶಿ ಎಸ್.ದೇವೇಂದ್ರಗೌಡ ಒತ್ತಾಯಿಸಿದರು.

ಯದ್ದಲದೊಡ್ಡಿ ಸುವರ್ಣಗಿರಿ ವಿರಕ್ತಮಠದ ಮಹಾಲಿಂಗ ಸ್ವಾಮೀಜಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ, ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ, ಜೆಡಿಎಸ್ ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ, ಬಸವಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ವೀರಭದ್ರಪ್ಪ ಕುರಕುಂದಿ, ಕನ್ನಡಪರ ಸಂಘಟನೆ ಮುಖಂಡ ಮೌನೇಶ ದೊರೆ ಮಾತನಾಡಿದರು.

ADVERTISEMENT

ಕಾಂಗ್ರೆಸ್ ಮುಖಂಡರಾದ ರಾಜುಗೌಡ ಬಾದರ್ಲಿ, ಜಾಫರ್‌ಅಲಿ ಜಾಗೀರದಾರ್, ಕಸಾಪ ಅಧ್ಯಕ್ಷ ಪಂಪಯ್ಯ ಸ್ವಾಮಿ ಸಾಲಿಮಠ, ಹುಸೇನಸಾಬ, ಖಾದರ್‍ಸುಭಾನಿ, ಕೆ.ಜಿಲಾನಿಪಾಷಾ, ಕರೇಗೌಡ ಕುರಕುಂದಿ, ಶರಣಪ್ಪ ತೆಂಗಿನಕಾಯಿ, ಮುನೀರ್‍ಪಾಷಾ, ಬಸವರಾಜ ಬಾದರ್ಲಿ, ಸಮ್ಮದ್ ಚೌದ್ರಿ, ಲಿಂಗಾಧರ್ ಗುರುಸ್ವಾಮಿ, ಚನ್ನಬಸಯ್ಯಸ್ವಾಮಿ, ಎಚ್.ಗಂಗಣ್ಣ ಡಿಶ್, ದಾವಲಸಾಬ ದೊಡ್ಮನಿ, ಸುರೇಶ ಕಟ್ಟಿಮನಿ, ಬಸವರಾಜ ಗಸ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.