ADVERTISEMENT

ರಾಯಚೂರು: ಸುರಕ್ಷಿತ ಚಿಕಿತ್ಸೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 11:59 IST
Last Updated 23 ಜುಲೈ 2020, 11:59 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪರಿಣಾಮಕಾರಿಯಾಗಿ ಎದುರಿಸಲು ಎಲ್ಲಾ ನಾಗರಿಕರಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆ ನೀಡಬೇಕು. ಇದಕ್ಕಾಗಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ 3 ರಷ್ಟು ವೆಚ್ಚ ಮಾಡಲು ಕ್ರಮವಹಿಸಬೇಕು ಎಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಯುನಿಯನ್ಸ್ (ಸಿಐಟಿಯು), ಕರ್ನಾಟಕ ಪ್ರಾಂತ ರೈತ ಸಂಘ (ಕೆ.ಆರ್.ಎಸ್) ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (ಎಐಎಡಬ್ಲ್ಯೂ ) ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿ ಅವರಿಗೆ ಮನವಿ ಸಲ್ಲಿಸಿ, ದೇಶದಾದ್ಯಂತ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು ಮತ್ತೊಂದೆಡೆ ಕೋವಿಡ್-19 ನಿಂದ ಸಂಕಷ್ಟ ಎದುರಿಸುತ್ತಿರುವ ಮಧ್ಯೆ ಇದನ್ನು ಸಮರ್ಥವಾಗಿ ನಿಭಾಯಿಸದ ಸರ್ಕಾರ ಜನವಿರೋಧಿ ನೀತಿ‌ ಅನುಸರಿಸಿ ಕಾರ್ಪೋರೆಟ್ ಕಂಪನಿಗಳಿಗೆ ಲಾಭ ಮಾಡಿಕೊಡಲು ಮುಂದಾಗಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಾದ ವರಲಕ್ಷ್ಮೀ, ಕೆ.ಜಿ.ವೀರೆಶ, ಡಿ.ಎಸ್. ಶರಣಬಸವ, ರಂಗನಗೌಡ, ಎಚ್.ಪದ್ಮಾ, ಪ್ರವೀಣ ರೆಡ್ಡಿ, ಶಂಕ್ರಪ್ಪ, ನರಸಯ್ಯ, ತಿಮ್ಮಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT