ADVERTISEMENT

ಪೂರ್ಣಪ್ರಮಾಣದ ತರಗತಿ ನಡೆಸುವಂತೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2022, 6:04 IST
Last Updated 6 ಜನವರಿ 2022, 6:04 IST
ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿ ನಡೆಸುವಂತೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು
ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿ ನಡೆಸುವಂತೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು   

ಮಸ್ಕಿ: ದೇವನಾಂಪ್ರಿಯ ಅಶೋಕ ಸರ್ಕಾರಿ ಪದವಿ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಪೂರ್ಣಪ್ರಮಾಣದ ತರಗತಿ ನಡೆಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ತಹಶೀಲ್ದಾರ್ ಕಚೇರಿಯ ಶಿರಸ್ತೆದಾರ ಅಖ್ತರ್ ಅಲಿ ಅವರಿಗೆ ಮನವಿ ಸಲ್ಲಿಸಲಾಯಿತು.

ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಮಹೇಶ ಮಸ್ಕಿ ಮಾತನಾಡಿ, ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರು ಇಲ್ಲದ ಕಾರಣ, ಕಳೆದ ಒಂದು ತಿಂಗಳಿನಿಂದ ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಿನ್ನಡೆಯಾಗುತ್ತಿದೆ ಎಂದರು.

ADVERTISEMENT

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ, ಕಾಲೇಜುಗಳಿಗೆ ಅಗತ್ಯ ಸೌಕರ್ಯಗಳು ಒದಗಿಸುವಂತೆ ಅವರು ಒತ್ತಾಯಿಸಿದರು.

ಎಬಿವಿಪಿ ತಾಲ್ಲೂಕು ಸಂಚಾಲಕ ರಘುನಾಥ ಠಾಕೂರು, ಸುನಿತ್ ದೀನಸಮುದ್ರ, ವೆಂಕಟೇಶ ಹುಲ್ಲೂರು, ವಿನಯ ಮಸ್ಕಿ, ವಿನಯ ಬಳಗಾನೂರು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.