ADVERTISEMENT

ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2019, 16:52 IST
Last Updated 14 ನವೆಂಬರ್ 2019, 16:52 IST
ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಯಚೂರಿನ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು
ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಯಚೂರಿನ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು   

ರಾಯಚೂರು: ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೈ ಭೀಮ್ ಸಂಘರ್ಷ ಸಮಿತಿ ಜಿಲ್ಲಾ ಘಟಕ ಆಗ್ರಹಿಸಿದೆ.

ಐಎಎಸ್ ಅಧಿಕಾರಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ್ ಅವರು ಸಂವಿಧಾನವನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿಲ್ಲ ಎಂದು ಹೇಳಿರುವುದು ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಇಂತಹ ಮನುವಾದಿಗಳ ವಿರುದ್ಧ ಕಾನೂನಿನ ಕ್ರಮ ಜರುಗಿಸಿ ಕೂಡಲೇ ಅವರನ್ನು ಕಾನೂನು ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ADVERTISEMENT

ಸಂಘದ ಜಿಲ್ಲಾ ಅಧ್ಯಕ್ಷ ಹನುಮಪ್ಪ ಭೇರಿ ಬುದ್ದಿನ್ನಿ, ಸಂಗಮೇಶ.ಕೆ, ವಿನೋದ ಚಾಗಭಾವಿ, ಈರಣ್ಣ, ಹನುಮಂತ ಹೇಮಗಡ್ಡಿ, ಮಹಾಂತೇಶ ಕಾಡ್ಲೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.