ADVERTISEMENT

ರಸ್ತೆ ತಡೆ: ಮುಖಂಡರ ಬಂಧನ

ರಾಹುಲ್‍ಗಾಂಧಿ, ಪ್ರಿಯಾಂಕಾ ಗಾಂಧಿ ಮೇಲೆ ಪೊಲೀಸ್ ದೌರ್ಜನ್ಯ ಖಂಡನೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 7:53 IST
Last Updated 3 ಅಕ್ಟೋಬರ್ 2020, 7:53 IST
ಸಿಂಧನೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಲು ಮುಂದಾದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು
ಸಿಂಧನೂರಿನ ಯುವ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಲು ಮುಂದಾದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು   

ಸಿಂಧನೂರು: ಉತ್ತರಪ್ರದೇಶ ಹಾಥರಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ವೇಳೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್‍ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಸಂಚಾರ ತಡೆದು ಪ್ರತಿಭಟಿಸಲು ಮುಂದಾದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆಯಿತು.

‘ಉತ್ತರ ಪ್ರದೇಶದಲ್ಲಿ ನಮ್ಮ ನಾಯಕರೇ ಸುರಕ್ಷಿತವಲ್ಲ ಎಂದ ಮೇಲೆ ಅಲ್ಲಿನ ದಲಿತರು, ಮಹಿಳೆಯರು, ರೈತರು, ಕಾರ್ಮಿಕರು ಹೇಗೆ ಸುರಕ್ಷಿತವಾಗಿರಲು ಸಾಧ್ಯ. ಉತ್ತರಪ್ರದೇಶ ಗೂಂಡಾ ಮತ್ತು ಅತ್ಯಾಚಾರಿಗಳ ರಾಜ್ಯವಾಗಿದ್ದು, ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ಆಗ್ರಹಿಸಿದರು.

ಶಹರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಒಂದು ತಾಸು ನಂತರ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಯಿತು.

ADVERTISEMENT

ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖಂಡರಾದ ವೆಂಕಟೇಶ ರಾಗಲಪರ್ವಿ, ಖಾಜಾಹುಸೇನ್ ರೌಡಕುಂದಾ, ಅಮರೇಶ ಬಾಗೋಡಿ, ಹನುಮೇಶ ಬಾಗೋಡಿ, ಹುಸೇನಬಾಷಾ, ಪ್ರಭು ದೇವರಗುಡಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.