ADVERTISEMENT

‘ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆಯಿರಿ’

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 10:24 IST
Last Updated 15 ಸೆಪ್ಟೆಂಬರ್ 2020, 10:24 IST
ಪರಿಶಿಷ್ಟ ಜಾತಿ ಜನಾಂಗದ ಜನರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಮಸ್ಕಿಯಲ್ಲಿ ಮಂಗಳವಾದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಪರಿಶಿಷ್ಟ ಜಾತಿ ಜನಾಂಗದ ಜನರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಮಸ್ಕಿಯಲ್ಲಿ ಮಂಗಳವಾದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಮಸ್ಕಿ: ರಾಜ್ಯದಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದನ್ನು ಖಂಡಿಸಿ ಪಟ್ಟಣದ ಡಾ.ಅಂಬೇಡ್ಕರ್ ಪ್ರತಿಮೆ ಮುಂದೆ ದಲಿತ ಸಂಘರ್ಷ ಸಮಿತಿ (ಮೂರ್ತಿ ಬಣ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಕೋವಿಡ್ ಸನ್ನಿವೇಶವನ್ನು ಬಳಸಿಕೊಂಡು ಪರಿಶಿಷ್ಟ ಜಾತಿ ಮಹಿಳೆಯರ ಹಾಗೂ ಜನರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದೆ. ಕೂಡಲೇ ಸರ್ಕಾರ ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ ಮುಖಂಡ ಅನಿಲ್ ಕುಮಾರ್, ಯಲ್ಲಾರಲಿಂಗ ಹಾಗೂ ಸುರೇಶ ಸೇರಿ ಸಮಿತಿ ಕಾರ್ಯಕರ್ತರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.